
ಮುಂಬೈ[ಜು.19]: ಸುಲಿಗೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಂಬಂಧಿ ರಿಜ್ವಾನ್ ಕಸ್ಕರ್ನನ್ನು ಬುಧವಾರ ತಡರಾತ್ರಿ ಮುಂಬೈ ಪೊಲೀಸರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ದಾವೂದ್‌ನ ಸೋದರ ಇಕ್ಬಾಲ್ ಕಸ್ಕರ್ನ ಮಗನೇ ಈ ರಿಜ್ವಾನ್. 2017ರಲ್ಲಿ ಮುಂಬೈನ ಉದ್ಯಮಿಯನ್ನು ಬೆದರಿಸಿ ಸುಲಿಗೆ ಮಾಡಿದ್ದ ಪ್ರಕರಣವೊಂದರ ವಿಚಾರಣೆ ವೇಳೆ ಹಲವರ ಹೆಸರುಗಳು ಬೆಳಕಿಗೆ ಬಂದಿದ್ದವು. ಅವರೆಲ್ಲರನ್ನೂ ವಿಚಾರಣೆಗೆ ಒಳಪಡಿಸಿದಾಗ ರಿಜ್ವಾನ್ ಹೆಸರು ಕೇಳಿಬಂದಿತ್ತು.
ಇದನ್ನರಿತ ರಿಜ್ವಾನ್ ದೇಶ ತೊರೆದು ಓಡಿಹೋಗಲು ಮುಂಬೈನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದಾಗ ಅಲ್ಲಿಗೆ ತೆರಳಿದ ಪೊಲೀಸರು ರಿಜ್ವಾನ್ನನ್ನು ವಶಕ್ಕೆ ಪಡೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.