
ಹೈದರಾಬಾದ್[ಜೂ.25]: ಓರ್ವ ಮುಸ್ಲಿಂ ಯುವಕ ಆದಿವಾಸಿ ಮಹಿಳೆಯನ್ನು ಹಿಂಬಾಲಿಸಿ ಕಿರುಕುಳ ನೀಡಿದರೆ ಆತನ ಕತ್ತು ಸೀಳಿ ಹಾಕಿ. ಇಂತಹ ಹೇಳಿಕೆ ನೀಡುವ ಮೂಲಕ ತೆಲ್ಲಂಗಾಣದ ಭಾರತೀಯ ಜನತಾ ಪಾರ್ಟಿಯ ಸಂಸದ ಸೋಯಂ ಬಾಪೂ ರಾವ್ ವಿವಾದಕ್ಕೀಡಾಗಿದ್ದಾರೆ.
ಸಂಸದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, 'ನಾನು ಮುಸ್ಲಿಂ ಯುವಕರಿಗೆ ಈ ಮಾತನ್ನು ಹೇಳುತ್ತಿದ್ದೇನೆ. ಒಂದು ವೇಳೆ ನೀವು ನಮ್ಮ ಆದಿವಾಸಿ ಯುವತಿಯರನ್ನು ಹಿಂಬಾಲಿಸಿದರೆ ಅಥವಾ ಚುಡಾಯಿಸಿದರೆ ನಿಮ್ಮ ಕತ್ತು ಸೀಳುತ್ತೇವೆ. ಹೀಗಾಗಿ ಆದಿಲಾಬಾದ್ ಜಿಲ್ಲೆಯ ಅಲ್ಪಸಂಖ್ಯಾತ ಯುವಕರಲ್ಲಿ ನಮ್ಮ ಆದಿವಾಸಿ ಮಹಿಳೆಯರಿಂದ ದೂರವಿರಿ ಎಂದು ಆಗ್ರಹಿಸುತ್ತೇನೆ' ಎಂದು ವಾರ್ನಿಂಗ್ ನೀಡಿದ್ದಾರೆ.
ಬಿಜೆಪಿ ಸಂಸದನ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ
ಸದ್ಯ ಬಿಜೆಪಿ ಸಂಸದನ ಈ ಹೇಳಿಕೆ ಭಾರೀ ವಿವಾದ ಹುಟ್ಟು ಹಾಕಿದೆ. ಇಲ್ಲಿನ ಅಲ್ಪಸಂಖ್ಯಾತ ಸಮುದಾಯದ ನಾಯಕರೆಲ್ಲಾ ಸೇರಿ ಸಂಸದರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ದೂರು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.