
ನವದೆಹಲಿ(ಆ.7): ಪ್ರಧಾನಿ ನರೇಂದ್ರ ಮೋದಿ ಅವರ ಅಚ್ಛೇ ದಿನ್ ಬೋಗಸ್ ಎಂದು ಸಾಬೀತಾಗಿದ್ದು, ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ನೈಜ ಭರವಸೆಯನ್ನು ಜನೆತೆಗೆ ನೀಡಬೇಕು ಎಂದು ಅಧ್ಯಕ್ಷ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.
ನವದೆಹಲಿಯಲ್ಲಿ ಇಂದು ನಡೆದ ಕಾಂಗ್ರೆಸ್ ಸಂಸದೀಯ ಸಮಿತಿ ಸಭೆಯಲ್ಲಿ ಮಾತನಾಡಿದ ರಾಹುಲ್, ಹಿಂಸೆ, ಅಸಹಿಷ್ಣುತೆ, ದ್ವೇಷವನ್ನೇ ಉಸಿರಾಡುತ್ತಿರುವ ಪ್ರಧಾನಿ ಮೋದಿ ಮತ್ತು ಬಿಜೆಪಿಯನ್ನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸೋಲಿಸಲೇಬೇಕು ಎಂದು ಹೇಳಿದರು.
ದೇಶದ ಸಂವಿಧಾನದ ಮೇಲೆ ನಿರಂತರವಾಗಿ ದಾಳಿ ಮಾಡಲಾಗುತ್ತಿದ್ದು, ಸಮಾಜವನ್ನು ಒಡೆಯಲು ಮೋದಿ ಯೋಜನೆ ಹಾಕಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಮತ್ತು ಇತರ ಬಿಜೆಪಿ ವಿರೋಧಿ ರಾಜಕೀಯ ಪಕ್ಷಗಳು ಮೋದಿ ಅವರ ದುಷ್ಟ ಯೋಜನೆಯನ್ನು ವಿಫಲಗೊಳಿಸಲಿವೆ ಎಂದು ರಾಹುಲ್ ಭರವಸೆ ವ್ಯಕ್ತಪಡಿಸಿದ್ದಾರೆ.
ಆರ್ಥಿಕ ಅಶಿಸ್ತು, ಉದ್ಯೋಗ ಸೃಷ್ಟಿಸುವಲ್ಲಿ ವಿಫಲತೆ, ಅಂತರಾಷ್ಟ್ರೀಯ ಸಂಬಂಧ ಸುಧಾರಣೆಯಲ್ಲಿ ವಿಫಲತೆ, ಇವೇ ಮುಂತಾದ ವಿಫಲತೆಗಳನ್ನು ಮುಚ್ಚಿಕೊಳ್ಳಲು ಪ್ರಧಾನಿ ಮೋದಿ ಸಮಾಜ ಒಡೆಯುವ ಕೃತ್ಯಕ್ಕೆ ಕೈ ಹಾಕಿದ್ದು, ಇದಕ್ಕೆ ಪ್ರತಿಯಾಗಿ ಜನರ ಸಮಸ್ಯೆಗಳ ನಿವಾರಣೆಗೆ ಕಾಂಗ್ರೆಸ್ ಮುಂದಾಗಲಿದೆ ಎಂದು ರಾಹುಲ್ ಭರವಸೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.