
ಕೋಲ್ಕತ್ತಾ[ಆ.21]: ಕೋಲ್ಕತ್ತಾದಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಇಲ್ಲಿನ ಆಸ್ಪತ್ರೆಯೊಂದರ ಶವಾಗಾರದಲ್ಲಿದ್ದ ಮೃತದೇಹದಿಂದ ಕಣ್ಣುಗಳೇ ನಾಪತ್ತೆಯಾಗಿವೆ. ಈ ಸಂಬಂಧ ದೂರು ದಾಖಲಾದ ಬೆನ್ನಲ್ಲೇ ಆಸ್ಪತ್ರೆ ಸಿಬ್ಬಂದಿ ತನಿಖೆ ಆರಂಭಿಸಿದ್ದು, ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ ಬಳಿಕ ಕಣ್ಣುಗಳು ನಾಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರದಂದು 69 ವರ್ಷದ ಶಂಭುನಾಥ ಹೆಸರಿನ ವ್ಯಕ್ತಿ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದರು. ಅವರ ತಲೆಗೆ ಗಂಭೀರ ಏಟಾಗಿತ್ತು. ಹೀಗಾಗಿ ವರನ್ನು ಕೂಡಲೇ ಹತ್ತರದ ವೈದ್ಯಕೀಯ ಕಾಲೇಜು, ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅಲ್ಲಿ ಅವರನ್ನು ಮೃತರೆಂದು ಘೋಷಿಸಲಾಯ್ತು.
ಮೃತ ವ್ಯಕ್ತಿಯ ಪುತ್ರ ಸುಶಾಂತ್ ಘಟನೆ ಸಂಬಂಧ ಪ್ರತಿಕ್ರಿಯಿಸಿದ್ದು, 'ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಶವವನ್ನು ನಮಗೆ ಹಸ್ತಾಂತರಿಸಿದಾಗ, ತಂದೆಯ ಕಣ್ಣುಗಳಿಲ್ಲದಿರುವ ವಿಚಾರ ಗಮನಕ್ಕೆ ಬಂದಿದೆ. ಈ ಕುರಿತಾಗಿ ವಿಚಾರಿಸಿದಾಗ ಮೃತದೇಹದ ಕಣ್ಣುಗಳನ್ನು ಇಲಿಗಳು ಕಿತ್ತುಹಾಕಿವೆ ಎಂದು ಶವಾಗಾರದ ಸಿಬ್ಬಂದಿ ತಿಳಿಸಿದ್ದಾರೆ' ಎಂದಿದ್ದಾರೆ.
ಸದ್ಯ ಪ್ರಕರಣದ ತನಿಖೆಗಾಗಿ ಆಸ್ಪತ್ರೆ ಆಡಳಿತ ಮಂಡಳಿ ಮೂವರು ಸದಸ್ಯರ ಸಮಿತಿ ರಚಿಸಿದೆ. ಹೀಗಿದ್ದರೂ ಆಸ್ಪತ್ರೆ ಆವರಣದಲ್ಲಿ ಆತಂಕದ ವಾತಾವರ್ಣ ನಿರ್ಮಾಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.