
ನವದೆಹಲಿ(ಜು.15): ವೆಬ್ ಸಿರೀಸ್ ಸೇಕ್ರೆಡ್ ಗೇಮ್ಸ್‌ನಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಬಗ್ಗೆ ಅವಹೇಳನ ಮಾಡಿರುವುದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನ್ನ ತಂದೆ ಭಾರತದ ಸೇವೆಗಾಗಿಯೇ ತಮ್ಮ ಜೀವವನ್ನು ಮುಡಿಪಾಗಿಟ್ಟಿದ್ದರು ಎಂದು ರಾಹುಲ್ ಹೇಳಿದ್ದಾರೆ. ಭಾರತದ ಸೇವೆಗಾಗಿಯೇ ನನ್ನ ತಂದೆ ಜೀವಿಸಿದ್ದರು ಮತ್ತು ಮರಣಿಸಿದರು. ವೆಬ್ ಸರಣಿಯ ಕಾಲ್ಪನಿಕ ಪಾತ್ರ ನನ್ನ ತಂದೆಯ ಮೇಲಿನ ದೃಷ್ಟಿಕೋನವನ್ನು ಎಂದಿಗೂ ಬದಲಾಯಿಸದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಾ ಸಂಘ ಮತ್ತು ಬಿಜೆಪಿ ಅಭಿವ್ಯಕ್ತ ಸ್ವಾತಂತ್ರ್ಯವನ್ನು ಪಾಲಿಸಬೇಕು ಮತ್ತು ನಿಯಂತ್ರಿಸಬೇಕು ಎಂದು ನಂಬುತ್ತದೆ. ಆದರೆ ನಾನು ಸ್ವಾತಂತ್ರ್ಯವೂ ಮೂಲಭೂತ ಪ್ರಜಾಪ್ರಭುತ್ವದ ಹಕ್ಕು ಎಂದು ನಂಬುತ್ತೇನೆ ಎಂದು ರಾಹುಲ್ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಸೇಕ್ರೇಡ್ ಗೇಮ್ಸ್‌ನಲ್ಲಿ ರಾಜೀವ್ ಗಾಂಧಿ ವಿರುದ್ಧ ನಿಂದನೀಯ ಪದ ಬಳಸಲಾಗಿದೆ. ಈ ದೃಶ್ಯಗಳನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ದಾಖಲಾಗಿದ್ದು ನಾಳೆ ಅರ್ಜಿಯ ವಿಚಾರಣೆ ನಡೆಯಲಿದೆ. ನೆಟ್ ಫ್ಲಿಕ್ಸ್, ವೆಬ್ ಸಿರೀಸ್‌ನ ನಿರ್ಮಾಪಕರು ಹಾಗೂ ನಟ ನವಾಜುದ್ದೀನ್ ವಿರುದ್ದ ಪಶ್ಚಿಮ ಬಂಗಾಳದ ಕಾಂಗ್ರೆಸ್ ನಾಯಕ ರಾಜೀವ್ ಕುಮಾರ್ ಸಿನ್ಹಾ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.