ಮೈಸೂರು ದಸರಾಗೆ ಅದ್ದೂರಿ ತೆರೆ

Published : Oct 12, 2016, 03:52 AM ISTUpdated : Apr 11, 2018, 12:56 PM IST
ಮೈಸೂರು ದಸರಾಗೆ ಅದ್ದೂರಿ ತೆರೆ

ಸಾರಾಂಶ

ಸಿಎಂ ಸಿದ್ದರಾಮಯ್ಯ 2.16 ನಿಮಿಷದ ಶುಭ ಮಕರ ಲಗ್ನದಲ್ಲಿ ನಂದಿಧ್ವಂಜಕ್ಕೆ ಪೂಜೆ ಸಲ್ಲಿಕೆಯಿಂದ ಆರಂಭವಾಗಿ ಬನ್ನಿಮಂಟಪದವರೆಗೆ ವಿವಿಧ ಕಾರ್ಯಕ್ರಮಗಳು ಸಾಂಗವಾಗಿ ನೆರವೇರಿದವು. 

ಮೈಸೂರು(ಅ.12): ಜಗದ್ವಿಖ್ಯಾತ 406ನೇ ಮೈಸೂರು ದಸರಾಗೆ ಅದ್ದೂರಿ ತೆರೆ ಬಿದ್ದಿದೆ.  

ಸಿಎಂ ಸಿದ್ದರಾಮಯ್ಯ 2.16 ನಿಮಿಷದ ಶುಭ ಮಕರ ಲಗ್ನದಲ್ಲಿ ನಂದಿಧ್ವಂಜಕ್ಕೆ ಪೂಜೆ ಸಲ್ಲಿಕೆಯಿಂದ ಆರಂಭವಾಗಿ ಬನ್ನಿಮಂಟಪದವರೆಗೆ ವಿವಿಧ ಕಾರ್ಯಕ್ರಮಗಳು ಸಾಂಗವಾಗಿ ನೆರವೇರಿದವು. 

ಮಧ್ಯಾಹ್ನ ಸುಮಾರು 4 ಗಂಟೆ 10 ನಿಮಿಷಕ್ಕೆ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಜಂಬೂ ಸವಾರಿಗೆ ಚಾಲನೆ ಕೊಟ್ಟರು. ಸುಮಾರು 750 ಕೆಜಿ ಚಿನ್ನದ ಅಂಬಾರಿಯಲ್ಲಿದ್ದ ದೇವಿ ಚಾಮುಂಡಿಗೆ ಸಿಎಂ ಪುಷ್ಪಾರ್ಚನೆ ಮೂಲಕ ಮೆರವಣಿಗೆಗೆ ಶ್ರೀಕಾರ ಹಾಕಿದರು.

ಸತತ 5ನೇ ಬಾರಿಗೆ ಚಿನ್ನದ ಅಂಬಾರಿ ಹೊತ್ತ ಅರ್ಜುನ ಚಿನ್ನದ ಅಂಬಾರಿಯಲಿ ಚಾಮುಂಡೇಶ್ವರಿ ದೇವಿಯ ವಿಗ್ರಹವನ್ನ ಹೊತ್ತು ಬನ್ನಿಮಂಟಪದವರೆಗೆ ಹೆಜ್ಜೆ ಹಾಕಿದ. 

ಸಂಜೆ ರಾಜ್ಯ ಪಾಲರು ಬನ್ನಿಮಂಟಪದಲ್ಲಿ ಪಂಜಿನ ಕವಾಯತಿಗೆ ಚಾಲನೆ ನೀಡಿದರು. ಬನ್ನಿ ಮಂಟಪದ ಮೈದಾನದಲ್ಲಿ  ಆಶ್ವಾರೋಹಿ ಸಿಬ್ಬಂದಿಯಿಂದ ಶೌರ್ಯ ಪ್ರದರ್ಶನ ಹಾಗೂ ಪಂಜಿನ ಕವಾಯತು ನಡೀತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!