
ಮೈಸೂರು(ಅ.01) ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ನೀಡಲಾಗಿದೆ. ಚಾಮುಂಡಿಬೆಟ್ಟದ ನಾಡ ಅಧಿದೇವತೆಗೆ ಅಗ್ರಪೂಜೆ ಸಲ್ಲಿಸುವ ಮೂಲಕ ದಸರೆಗೆ ಚಾಲನೆ ದೊರಕಿದ್ದು, ಸಾಹಿತಿ ಚನ್ನವೀರ ಕಣವಿ ಅವರಿಂದ ನಾಡಹಬ್ಬ ಉದ್ಘಾಟನೆಗೊಂಡಿದೆ.
ಚಾಮುಂಡಿಬೆಟ್ಟದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ಬೆಳಗ್ಗೆ 11 ಗಂಟೆ 40 ನಿಮಿಷಕ್ಕೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ ನಾಡಹಬ್ಬ ದಸರಾಕ್ಕೆ ಚಾಲನೆ ದೊರಕಿದೆ.
ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಡಾ. ಎಚ್.ಸಿ.ಮಹದೇವಪ್ಪ, ಎಚ್.ಎಸ್.ಮಹದೇವ ಪ್ರಸಾದ್, ಕ್ರೀಡಾಪಟುಗಳಾದ ಅಶ್ವಿನಿ ಪೊನ್ನಪ್ಪ, ದೀಪಾಮಲ್ಲಿಕ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ, ಚಿಕ್ಕಮಾದು, ಸಾ.ರಾ.ಮಹೇಶ್ ಉಪಸ್ಥಿತಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.