ಮಂಡ್ಯ: ಮೈಶುಗರ್ ಕಾರ್ಖಾನೆ ಪುನಾರಂಭ

Published : Apr 14, 2017, 01:14 PM ISTUpdated : Apr 11, 2018, 12:42 PM IST
ಮಂಡ್ಯ: ಮೈಶುಗರ್ ಕಾರ್ಖಾನೆ ಪುನಾರಂಭ

ಸಾರಾಂಶ

ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣ ಸಕ್ಕರೆ ಕಾರ್ಖಾನೆಯ ಬಾಯ್ಲರ್‌’ಗೆ ಬೆಂಕಿ ಸ್ಪರ್ಷಿಸುವ ಮೂಲಕ ಪುನಾರಂಭಕ್ಕೆ ಚಾಲನೆ ನೀಡಿದರು.

ಮಂಡ್ಯ (ಏ.14): ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಂಡಿದ್ದ ಮಂಡ್ಯ ರೈತರ ಜೀವನಾಡಿ ಮೈಶುಗರ್ ಸಕ್ಕರೆ ಕಾರ್ಖಾನೆ ಕೊನೆಗೂ ಪುನಾರಂಭಗೊಂಡಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಕೃಷ್ಣ ಸಕ್ಕರೆ ಕಾರ್ಖಾನೆಯ ಬಾಯ್ಲರ್‌’ಗೆ ಬೆಂಕಿ ಸ್ಪರ್ಷಿಸುವ ಮೂಲಕ ಪುನಾರಂಭಕ್ಕೆ ಚಾಲನೆ ನೀಡಿದರು.

ಈ ವೇಳೆ ಮಂಡ್ಯ ಶಾಸಕ ಅಂಬರೀಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆತ್ಮಾನಂದ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. ಇನ್ನೂ ಕಾರ್ಖಾನೆ ಪುನಾರಂಭಗೊಂಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಶಾಸಕ ಅಂಬರೀಶ್, ಕಾರ್ಖಾನೆ ಪುನಾರಂಭಕ್ಕೆ ಸರ್ಕಾರ ಸಾಕಷ್ಟು ನೆರವು ನೀಡಿದ್ದು, ಮುಂದಿನ ದಿನಗಳಲ್ಲಿ ಈ ಕಾರ್ಖಾನೆ ಮತ್ತಷ್ಟು ಅಭಿವೃದ್ದಿ ಪಥದಲ್ಲಿ ಸಾಗಲಿದೆ ಎಂದು ಭರವಸೆ ನೀಡಿದರು. ಇದಕ್ಕೂ ಮುನ್ನ ಶಾಸಕ ಅಂಬರೀಶ್ ಕಾರ್ಖಾನೆಯ ಅಧಿಕಾರಿಗಳು ಮತ್ತು ರೈತರೊಂದಿಗೆ ಕೆಲಕಾಲ ಸಭೆ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆ ಶಿವಕುಮಾರ್‌ಗೆ ಕೇಂದ್ರ ನಾಯಕತ್ವ ಸ್ಥಾನ : ಕಾಂಗ್ರೆಸ್‌ನಲ್ಲಿ ಕೂಗು
ನಾಯಕತ್ವ ಬದಲಾವಣೆ ಹೇಳಿಕೆ ಒಂದು ತಿಂಗಳ ಮೌನವ್ರತ : ಪಿ.ರವಿಕುಮಾರ್