ಪಾರ್ಕ್​ ಜಾಗದಲ್ಲಿ ಪೊಲೀಸ್ ಕಮಿಷನರ್ ಕಚೇರಿ!

By Suvarna Web DeskFirst Published Jan 16, 2017, 2:10 AM IST
Highlights

ನಜರಾಬಾದ್​​ನಲ್ಲಿ ಕಚೇರಿ ನಿರ್ಮಾಣ ಮಾಡಲು ನಗರಾಭಿವೃದ್ಧಿ ಇಲಾಖೆ ಅನುಮತಿಯನ್ನೂ ಕೊಟ್ಟಿಲ್ಲ. ಆದರೂ ಸಿಎಂ ಸಿದ್ದರಾಮಯ್ಯನವರು ಅಡಿಗಲ್ಲಿಟ್ಟು ಕಚೇರಿ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಮೈಸೂರು (ಜ.15): ಮೈಸೂರಲ್ಲಿ ಸಾರ್ವಜನಿಕರ ಉಪಯೋಗಕ್ಕಿದ್ದ ಪಾರ್ಕ್ ಜಾಗದಲ್ಲಿ  ಪೊಲೀಸ್​ ಕಮೀಷನರ್​ ಕಚೇರಿ ತಲೆಎತ್ತುತ್ತಿದ್ದು  ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ನಜರಾಬಾದ್​​ನಲ್ಲಿ ಕಚೇರಿ ನಿರ್ಮಾಣ ಮಾಡಲು ನಗರಾಭಿವೃದ್ಧಿ ಇಲಾಖೆ ಅನುಮತಿಯನ್ನೂ ಕೊಟ್ಟಿಲ್ಲ. ಆದರೂ ಸಿಎಂ ಸಿದ್ದರಾಮಯ್ಯನವರು ಅಡಿಗಲ್ಲಿಟ್ಟು ಕಚೇರಿ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಇದು   ನಜರಾಬಾದ್​​ ನಿವಾಸಿಗಳ ವಿರೋಧಕ್ಕೆ ಕಾರಣವಾಗಿದೆ. ಕಾನೂನು ಗಾಳಿಗೆ ತೂರಿ ಪಾರ್ಕ್​​ ಜಾಗದಲ್ಲಿ ಕಚೇರಿ ನಿರ್ಮಾಣವಾಗುತ್ತಿರುವುದನ್ನು ಪ್ರಶ್ನಿಸಿ ಅಶೋಕ್​ ಕುಮಾರ್​ ಹೈಕೋರ್ಟ್​​​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಬಳಿಕ ಹೈಕೋರ್ಟ್​ 2016ರ ಅಕ್ಟೋಬರ್​ನಲ್ಲಿ ಕಟ್ಟಡ ನಿರ್ಮಾಣಕ್ಕೆ ತಡೆ ನೀಡಿದೆ. ಅದಾಗ್ಯೂ ಕಾಮಗಾರಿ ನಡೆಯುತ್ತಲೇ ಇದೆ ಎಂದು ಸ್ಥಳೀಯರು ದೂರಿದ್ದಾರೆ.

click me!