
ಮೈಸೂರು : ಮೈಸೂರಿನ ಪೊಲೀಸ್ ಓರ್ವರು ಬರೆದ ಲೆಟರ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಾಡೂಟ ತಿನ್ನಲು ರಜೆ ಬೇಕೆಂದು ಕೇಳಿ ನಜರಬಾದ್ ಠಾಣೆ ಎಎಸ್ ಐ ಮಂಜುನಾಥ್ ಪತ್ರ ಬರೆದಿದ್ದು, ತಿಂಗಳಿನಿಂದ ಕೆಲಸ ಮಾಡಿ ಆಯಾಸವಾಗಿದೆ. ಮಧುಮೇಹ, ಬಿಪಿ ಇದ್ದು ವಿಶ್ರಾಂತಿ ಪಡೆದುಕೊಳ್ಳಬೇಕಿದೆ ಎಂದು ದೇವರಾಜ ಉಪವಿಭಾಗ ಸಹಾಯಕ ಆಯುಕ್ತರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಮೈಸೂರಿನ ನಜರಬಾದ್ ಎಎಸ್ಐ ಮಂಜುನಾಥ.ಪಿ ಸಹಿ ಇರುವ ರಜೆ ಪತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪೊಲೀಸ್ ಇಲಾಖೆಯಲ್ಲಿ ಈ ರೀತಿಯಾಗಿ ರಜೆ ಕೇಳಿದ ಪತ್ರ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ ಪೇದೆಯೋರ್ವರು ಬರೆದ ಪತ್ರವೂ ಕೂಡ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಇದೀಗ ಮೈಸೂರು ಪೊಲೀಸ್ ಪತ್ರದ ವಿಚಾರ ಸದ್ದು ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.