ಪತ್ರಕರ್ತ ನಕ್ಕೀರನ್ ಗೋಪಾಲ್ ಬಂಧನ

Published : Oct 09, 2018, 02:06 PM ISTUpdated : Oct 09, 2018, 06:20 PM IST
ಪತ್ರಕರ್ತ ನಕ್ಕೀರನ್ ಗೋಪಾಲ್ ಬಂಧನ

ಸಾರಾಂಶ

ತಮಿಳು ಪತ್ರಕರ್ತ ನಕ್ಕೀರನ್ ಗೋಪಾಲ್ ಅವರನ್ನು ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಲೇಖನ ಪ್ರಕಟ ಮಾಡಿರುವ ಸಂಬಂಧ ಚೆನ್ನೈನಲ್ಲಿ ಬಂಧಿಸಲಾಗಿದೆ.

ಚೆನ್ನೖ : ಪ್ರಸಿದ್ಧ ತಮಿಳು ವಾರಪತ್ರಿಕೆ ನಕ್ಕೀರನ್  ಸಂಪಾದಕ ಗೋಪಾಲ್ ಅವರನ್ನು ಮಂಗಳವಾರ ಬೆಳಗ್ಗೆ ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. 

ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರ ವಿರುದ್ಧ ಅವಹೇಳನಕಾರಿ ಬರಹ ಬರೆದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಪಡಿಸಲಾಗಿದೆ. 

ಪುಣೆಗೆ ತೆರಳಲು ಚೆನ್ನೈ ವಿಮಾನ ನಿಲ್ದಾಣಕ್ಕೆ ತೆರಳಿದ್ದ ವೇಳೆ ಪೊಲೀಸರು ಬಂಧನಕ್ಕೆ ಒಳಪಡಿಸಿದ್ದಾರೆ. ತಮಿಳುನಾಡಿನ ಕಾಲೇಜು ಫ್ರೊಫೆಸರ್ ಓರ್ವರನ್ನು ಸೆಕ್ಸ್ ಮಾರ್ಕ್ಸ್ ಸ್ಕ್ಯಾಮ್ ನಲ್ಲಿ ಬಂಧಿಸಲಾಗಿದ್ದು, ಫ್ರೊಫೆಸರ್ ನಿರ್ಮಲಾ ದೇವಿ ವಿದ್ಯಾರ್ಥಿನಿಯರಿಗೆ ಇತರೆ ಫ್ರೊಫೆಸರ್ ಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಹೇಳಿದ್ದರು.

ಅಲ್ಲದೇ ಇದರಿಂದ ಒಳ್ಳೆ ಅಂಕಗಳನ್ನು ಪಡೆದುಕೊಳ್ಳಬಹುದು ಎಂದಿದ್ದರು. ಈ ಬಗ್ಗೆ ನಿರ್ಮಲಾ ದೇವಿ ವಿದ್ಯಾರ್ಥಿನಿಯರೊಂದಿಗೆ  ದೂರವಾಣಿಯಲ್ಲಿ ನಡೆಸಿದ ಸಂಭಾಷಣೆ ವೈರಲ್ ಆಗಿತ್ತು. ಆದರೆ ಈ ಪ್ರಕರಣ ಸಂಬಂಧ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಸೂಕ್ತ ತನಿಖೆಯನ್ನು ನಡೆಸಲು ಆದೇಶ ನೀಡಲಿಲ್ಲ ಎಂದು ಆರೋಪ ಮಾಡಿದ್ದು, ಅವರ ವಿರುದ್ಧ ಅವಹೇಳನಕಾರಿ ಲೇಖನ ಪ್ರಕಟಿಸಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಇದೀಗ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. 

ಕಳೆದ ಒಂದು ವರ್ಷದ ಅವಧಿಯಲ್ಲಿ ತಮಿಳುನಾಡಿನಲ್ಲಿ ಯಾವುದೇ ಓರ್ವ ಪತ್ರಕರ್ರ್‌ನ ವಿರುದ್ಧವೂ ಕೂಡ ಪ್ರಕರಣ ದಾಖಲಾಗಿರಲಿಲ್ಲ. ಜಯಲಲಿತಾ ಅವಧಿಯಲ್ಲಿ 200ಕ್ಕೂ ಅಧಿಕ ಪತ್ರಕರ್ತರ ವಿರುದ್ಧ ಪ್ರಕರಣ ದಾಖಲಾಗಿದ್ದವು.  ಇದೀಗ ಗೋಪಾಲ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು