
ಬೆಂಗಳೂರು[ಆ.24]: ಉದ್ಯಮಿ ಪುತ್ರ ವಿದ್ವತ್ ಅವರ ಕೊಲೆಯತ್ನ ಪ್ರಕರಣದ ಆರೋಪಿ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಲಂಡನ್‌ಗೆ ತೆರಳಲು ಅನುಮತಿ ನೀಡುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಇದನ್ನು ಓದಿ: ‘ನಾನು ಅಹಂಕಾರಿ ಅಲ್ಲ, ಕ್ರೂರಿಯೂ ಅಲ್ಲ’
ಪ್ರಕರಣ ಸಂಬಂಧ ನಲಪಾಡ್‌ಗೆ 2018ರ ಜೂನ್ 14ರಂದು ಜಾಮೀನು ಮಂಜೂರು ಮಾಡಿದ್ದ ಹೈಕೋರ್ಟ್, ನಗರ ಬಿಟ್ಟು ಹೊರ ಹೋಗದಂತೆ ಷರತ್ತು ವಿಧಿಸಿತ್ತು. ಈ ಷರತ್ತು ಸಡಿಲಿಸುವಂತೆ
ಕೋರಿ ನಲಪಾಡ್ ಇದೀಗ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ಪ್ರಾಸಿಕ್ಯೂಷನ್ ಪರ ವಿಶೇಷ ಸರ್ಕಾರಿ ಅಭಿಯೋಜಕರಾದ ಎಂ.ಎಸ್. ಶ್ಯಾಮಸುಂದರ್, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ನೀಡುವಂತೆ ಮಾಡಿದ ಮನವಿ ಪುರಸ್ಕರಿಸಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 27ಕ್ಕೆ ಮುಂದೂಡಿತು.
ಇದನ್ನು ಓದಿ: ನಲಪಾಡ್ ಸಹಚರರಿಗೆ ಬಿಗ್ ರಿಲೀಫ್
ಲಂಡನ್‌ಗೆ ಹೋಗಲು ಅನುಮತಿ ನೀಡಿ: ನನ್ನ ಸಹೋದರ ಲಂಡನ್‌ನಲ್ಲಿ ನೆಲೆಸಿದ್ದಾನೆ. ಆತನನ್ನು ಭೇಟಿ ಮಾಡುವುದಕ್ಕಾಗಿ ಇದೇ 25ರಿಂದ 15 ದಿನಗಳ ಕಾಲ ಲಂಡನ್‌ಗೆ ತೆರಳಲು ಉದ್ದೇಶಿಸಿದ್ದೇನೆ. ಆದ್ದರಿಂದ ಜಾಮೀನು ಷರತ್ತು ಸಡಿಲಿಸಿ ಲಂಡನ್‌ಗೆ ತೆರಳಲು ಅವಕಾಶ ಕಲ್ಪಿಸಬೇಕು ಎಂದು ನಲಪಾಡ್ ತನ್ನ ಅರ್ಜಿಯಲ್ಲಿ ಕೋರಿದ್ದಾರೆ.
2018ರ ಫೆ.17ರಂದು ರಾತ್ರಿ ಮೊಹಮದ್ ನಲಪಾಡ್ ಹ್ಯಾರಿಸ್ ಮತ್ತು ಅವರ ಸಹಚರರು ನಗರದ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರು, ವಿದ್ವತ್ ಕೊಲೆಗೆ ಯತ್ನಿಸಿದ ಆರೋಪದಲ್ಲಿ ನಲಪಾಡ್ ಅವರನ್ನು ಮೊದಲನೆ ಆರೋಪಿಯನ್ನಾಗಿಸಿ ಅಧೀನ ನ್ಯಾಯಾಲಯಕ್ಕೆ 2018ರ ಮೇ 1ರಂದು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.