
ಬೆಂಗಳೂರು: ಮೊಬೈಲ್ ಆ್ಯಪ್ ಆಧಾರಿತ ಕ್ಯಾಬ್ ಸೇವೆ ನೀಡುತ್ತಿರುವ ಓಲಾ ಹಾಗೂ ಉಬರ್ ಸಂಸ್ಥೆಗಳಿಗೆ ಸೆಡ್ಡು ಹೊಡೆದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್..ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸಮಾನ ಮನಸ್ಕ ಚಾಲಕರೇ ಸೇರಿ ಆರಂಭಿಸಿರುವ ಹುಲಿ ಟೆಕ್ನಾಲಜೀಸ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆಯ ‘ನಮ್ಮ ಟೈಗರ್ ಕ್ಯಾಬ್ ಆ್ಯಪ್’ ಲೋಕಾರ್ಪಣೆ ಕಾರ್ಯಕ್ರಮ ನ. 29 ರಂದು ನಡೆಯಲಿದೆ.
ಪುರಭವನದಲ್ಲಿ ಬೆಳಗ್ಗೆ 11 ಗಂಟೆಗೆ ಆಯೋಜಿಸಿರುವ ಸಮಾರಂಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನೂತನ ಆ್ಯಪ್ ಲೋಕಾರ್ಪಣೆಗೊಳಿಸಲಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಸಂಸ್ಥೆಯ ಲಾಂಛನ ಅನಾವರಣಗೊಳಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಜೆಡಿಎಸ್ ರಾಷ್ಟ್ರೀಯ ವಕ್ತಾರ ಜಫ್ರುಲ್ಲಾಖಾನ್, ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ, ಸಾರಿಗೆ ಇಲಾಖೆ ಆಯುಕ್ತ ಬಿ.ದಯಾನಂದ, ಹೆಚ್ಚುವರಿ ಪೊಲೀಸ್ ಆಯುಕ್ತ ಆರ್.ಹಿತೇಂದ್ರ, ಡಿಸಿಪಿ ಅಜಯ್ ಹಿಲೊರಿ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.