
ಬೆಂಗಳೂರು: ಕಂಪನಿಯ ಕಳಪೆ ‘ಆಡಳಿತ’ದ ತಮ್ಮ ಯಾವುದೇ ಪ್ರಶ್ನೆಗಳಿಗೆ ಪಾರದರ್ಶಕವಾಗಿ ಉತ್ತರಿಸದ ಬಗ್ಗೆ ಇನ್ಫೋಸಿಸ್ ಬಗ್ಗೆ ಇನ್ಫೋಸಿಸ್ ಸಂಸ್ಥಾಪಕರಲ್ಲಿ ಒಬ್ಬರಾದ ಎನ್.ಆರ್.ನಾರಾಯಣ ಮೂರ್ತಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಇನ್ಫೋಸಿಸ್ ಕಂಪನಿ, ಪನಾಯಾ ಕಂಪನಿ ಖರೀದಿ ಬಗ್ಗೆ ತಾವು ಎತ್ತಿದ್ದ ಆಕ್ಷೇಪ ಮತ್ತು ಕೆಲ ಹಿರಿಯ ಅಧಿಕಾರಿಗಳಿಗೆ ನೀಡಿದ್ದ ಬೃಹತ್ ಮೊತ್ತದ ಕುರಿತು ಕಂಪನಿಯ ನೂತನ ಆಡಳಿತ ಮಂಡಳಿ ಕೂಡ ಸೂಕ್ತ ಮಾಹಿತಿ ನೀಡುವಲ್ಲಿ ವಿಫಲವಾಗಿದೆ ಎಂದು ಮೂರ್ತಿ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಮಧ್ಯೆ, ಇನ್ಫೋಸಿಸ್ ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕ ವರದಿಯನ್ನು ಮಂಗಳವಾರ ಪ್ರಕಟಿಸಿದೆ. ಈ ತ್ರೈಮಾಸಿಕದಲ್ಲಿ ಕಂಪನಿ ಶೇ.3.3ರಷ್ಟು ಬೆಳವಣಿಗೆ ಸಾಧಿಸುವ ಮೂಲಕ 3726 ಕೋಟಿ ರು. ಲಾಭ ಸಾಧಿಸಿದೆ.
ಹಿಂದಿನ ಸಿಇಒ ವಿಶಾಲ್ ಸಿಕ್ಕಾ ರಾಜೀನಾಮೆ ಬಳಿಕ, ಸಂಸ್ಥಾಪಕ ಸದಸ್ಯ ನಂದನ್ ನಿಲೇಕಣಿ ಕಂಪನಿ ಚುಕ್ಕಾಣಿ ಹಿಡಿದಿದ್ದರು. ಆ ಬಳಿಕ ಪ್ರಕಟಗೊಂಡ ಮೊದಲ ತ್ರೈಮಾಸಿಕ ವರದಿ ಇದಾಗಿದೆ. ಜುಲೈ- ಸೆಪ್ಟೆಂಬರ್ ಅವಧಿಯಲ್ಲಿ ಕಂಪನಿಯ ಒಟ್ಟು ಆದಾದ 17,567 ಕೋಟಿ ರು. ತಲುಪಿದೆ.
ಇದೇ ವೇಳೆ ಭಾರೀ ವಿವಾದಕ್ಕೆ ಕಾರಣವಾಗಿದ್ದ ಪನಾಯಾ ಕಂಪನಿ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದೂ ಕಂಪನಿ ಸ್ಪಷ್ಟಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.