
ಹೊಸಪೇಟೆ (ಫೆ. 21): ಕುಮಾರಸ್ವಾಮಿ ಅವರಪ್ಪನಾಣೆಗೂ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಹೇಳುತ್ತಿದ್ದವರೇ ಎಚ್ಡಿಕೆಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರು. ಈಗ ಮೋದಿ ಅವರ ಬಗ್ಗೆ ಮಾತನಾಡುತ್ತಿರುವ ಸಿದ್ದರಾಮಯ್ಯನವರೇ ನಿಮ್ಮಪ್ಪನಾಣೆಗೂ ನರೇಂದ್ರ ಮೋದಿ ಅವರೇ ಮತ್ತೊಮ್ಮೆ ಪ್ರಧಾನಮಂತ್ರಿಯಾಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಕಾಂಗ್ರೆಸ್ ಟಿಕೆಟ್ ಸಿಗದಿದ್ದರೆ ಸುಮಲತಾ ಪಕ್ಷೇತರರಾಗಿ ಸ್ಪರ್ಧೆ?
ಅವರಪ್ಪನಾಣೆಗೂ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ ಎಂದು ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶೆಟ್ಟರ್ ತಿರುಗೇಟು ನೀಡಿದರು.
ದೇಶಕ್ಕೆ ಉತ್ತಮ ಭವಿಷ್ಯ ಬೇಕೆಂದರೆ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲೇಬೇಕು ಎಂದು ಎಲ್ಲ ವರ್ಗದ ಜನರು ಹೇಳುತ್ತಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರ ಬಗ್ಗೆ ಸಿದ್ದರಾಮಯ್ಯ ಅವರು ಅತ್ಯಂತ ಹಗುರವಾಗಿ ಮಾತನಾಡುತ್ತಿದ್ದಾರೆ. ಅಲ್ಲದೆ ಸೂರ್ಯ- ಚಂದ್ರ ಇರುವುದು ಎಷ್ಟುಸತ್ಯವೋ 2019ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗುವುದು ಅಷ್ಟೇ ಸತ್ಯ ಎಂದರು.
ಸೆಡ್ಡು ಹೊಡೆದ ಉಮೇಶ್ ಜಾಧವ್, ಮಲ್ಲಿಕಾರ್ಜುನ ಖರ್ಗೆ ಅನುಭವದ ಆಟ
ಸಿದ್ದರಾಮಯ್ಯನವರ ದುರಹಂಕಾರದ ನಡವಳಿಕೆಯು ರಾಜ್ಯದಲ್ಲಿ ಕಾಂಗ್ರೆಸ್‌ನ ಅವನತಿಗೆ ಕಾರಣವಾಗುತ್ತಿದೆ. ರಾಜ್ಯದ ಸಮ್ಮಿಶ್ರ ಸರ್ಕಾರ ಬಿದ್ದರೆ ಅದಕ್ಕೆ ಸಿದ್ದರಾಮಯ್ಯ ಅವರೇ ಕಾರಣೀಭೂತರಾಗುತ್ತಾರೆ ಎಂದರು.
ಕಾಂಗ್ರೆಸ್‌ನವರು 60 ವರ್ಷಗಳ ಕಾಲ ಆಡಳಿತ ನಡೆಸಿ ದೇಶದಲ್ಲಿ ರಾಡಿ ಮಾಡಿ ಹೋಗಿದ್ದರು. ದೇಶವನ್ನು ಆರ್ಥಿಕ ದುರ್ಬಲವಾಗಿ ಮತ್ತು ದಿವಾಳಿ ಮಾಡಿದ್ದರು. ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ. ದೇಶದಲ್ಲಿ ಉತ್ತಮ ಆಡಳಿತವನ್ನು ನೀಡಿ ಆರ್ಥಿಕಾಭಿವೃದ್ಧಿ ಹೊಂದುವ ಮೂಲಕ ಬಲಾಢ್ಯ ದೇಶವನ್ನಾಗಿ ರೂಪಿಸುತ್ತಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.