
ನವದೆಹಲಿ(ಜೂ.17): ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕ ಕಾಲಕ್ಕೆ ಚುನಾವಣೆ ನಡೆಸುವ ಬಗ್ಗೆ ವಿಸ್ತೃತ ಚರ್ಚೆ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲ ರಾಜ್ಯಗಳಿಗೆ ಕರೆ ನೀಡಿದ್ದಾರೆ.
ಇಂದು ಬಹುತೇಕ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದ ನೀತಿ ಆಯೋಗ ಮಂಡಳಿಯ ನಾಲ್ಕನೇ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಸಾರ್ವಜನಿಕರ ಹಣ ಉಳಿತಾಯ ಮಾಡಲು ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯನ್ನು ಒಟ್ಟಿಗೆ ನಡೆಸುವ ಬಗ್ಗೆ ವ್ಯಾಪಕ ಚರ್ಚೆ ಮತ್ತು ಸಮಾಲೋಚನೆ ನಡೆಸುವಂತೆ ಕರೆ ನೀಡಿದರು.
ಈ ವಿಷಯದಲ್ಲಿ ಕೇಂದ್ರ ಸರ್ಕಾರ ಸಕಾರಾತ್ಮಕ ಅಭಿಪ್ರಾಯ ಹೊಂದಿದ್ದು, ಎಲ್ಲ ರಾಜ್ಯಗಳೂ ಈ ನಿಟ್ಟಿನಲ್ಲಿ ಚರ್ಚೆ ನಡೆಸಿ ಸೂಕ್ತ ನಿರ್ಧಾರಕ್ಕೆ ಬರಬೇಕು ಎಂದು ಮೋದಿ ಮನವಿ ಮಾಡಿದರು. ಒಂದು ವೇಳೆ ಎಲ್ಲ ರಾಜ್ಯಗಳೂ ಒಪ್ಪಿಗೆ ನೀಡಿದಲ್ಲಿ, ಕೇಂದ್ರ ಸರ್ಕಾರ ಈ ಕುರಿತು ಕಾನೂನು ಮಾಡಲು ಸಿದ್ದ ಎಂದು ಅವರು ಭರವಸೆ ನೀಡಿದರು.
ಇದೇ ವೇಳೆ, ಭಾರತದಲ್ಲಿ ಕೃಷಿ ಕ್ಷೇತ್ರದಲ್ಲಿನ ಕಾರ್ಪೋರೇಟ್ ಹೂಡಿಕೆ ಅತ್ಯಂತ ಕಡಿಮೆ ಇದೆ. ಕೃಷಿ ಕ್ಷೇತ್ರದಲ್ಲಿನ ಕಾರ್ಪೋರೇಟ್ ಹೂಡಿಕೆ ಹೆಚ್ಚಿಸಲು ರಾಜ್ಯ ಸರ್ಕಾರ ನಿಯಮಗಳನ್ನು ಬದಲಿಸಬೇಕು ಎಂದು ಪ್ರಧಾನಿ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.