2019ರ ಲೋಕಸಭಾ ಚುನಾವಣೆ ಗೆಲ್ಲಲು ಮೋದಿ ಹೊಸ ಪ್ಲಾನ್

Published : Dec 13, 2018, 07:23 AM IST
2019ರ ಲೋಕಸಭಾ ಚುನಾವಣೆ ಗೆಲ್ಲಲು ಮೋದಿ ಹೊಸ ಪ್ಲಾನ್

ಸಾರಾಂಶ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದೀಗ 2019ರ ಲೋಕಸಭಾ ಚುನಾವಣೆ ಗೆಲ್ಲಲು ಇದೀಗ ಹೊಸ ಪ್ಲಾನ್ ಒಂದನ್ನು ಮಾಡಿಕೊಂಡಿದೆ. ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಣೆಯ ಬೆನ್ನಲ್ಲೇ ಹೊಸ ಚಿಂತನೆ ಮಾಡಿದೆ. 

ನವದೆಹಲಿ :  ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಣೆಯ ಬೆನ್ನಲ್ಲೇ ಬಿಜೆಪಿ ಎಚ್ಚೆತ್ತಂತೆ ತೋರುತ್ತಿದ್ದು, ಈ ಎಲ್ಲ ರಾಜ್ಯಗಳಲ್ಲಿ ಪಕ್ಷದ ಸೋಲಿಗೆ ರೈತರ ಸಮಸ್ಯೆಗಳು ಕಾರಣ ಎಂಬುದನ್ನು ಮನಗಂಡಂತಿದೆ. ಅದಕ್ಕೆಂದೇ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಮಾಡಿಕೊಂಡಿರುವ 4 ಲಕ್ಷ ಕೋಟಿ ರುಪಾಯಿ ಸಾಲ ಮನ್ನಾ ಮಾಡಲು ಚಿಂತನೆಯನ್ನು ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ್ದಾರೆ ಎಂಬ ಮಹತ್ವದ ಮಾಹಿತಿ ಲಭಿಸಿದೆ. 2019ರ ಚುನಾವಣೆ ಗೆಲ್ಲಲು ಈ ರೀತಿ ಹೊಸ ಬಾಣ ಹೂಡುತ್ತಿದೆ. 

ರಿಸರ್ವ್ ಬ್ಯಾಂಕ್‌ನಲ್ಲಿರುವ ಮೀಸಲು ನಿಧಿ ಬಳಕೆ

ರೈತರ ಸಾಲ ಮನ್ನಾ ಮಾಡೋದಕ್ಕೆ ಹಣ ಹೊಂದಿಸುವುದು ಹೇಗೆ ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡಬಹುದು. ಆದರೆ ಸರ್ಕಾರವು ಭಾರತೀಯ ರಿಸರ್ವ್ ಬ್ಯಾಂಕ್‌ನಲ್ಲಿರುವ ಮೀಸಲು ನಿಧಿಯನ್ನು ಇದಕ್ಕೆ ಬಳಸಿಕೊಳ್ಳಬಹುದು ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಆರ್‌ಬಿಐನಲ್ಲಿನ ಮೀಸಲು ನಿಧಿಯಲ್ಲಿ 3.6 ಲಕ್ಷ ಕೋಟಿ ರುಪಾಯಿ ಬೇಕು ಎಂಬ ಇರಾದೆಯನ್ನು ಸರ್ಕಾರ ಇತ್ತೀಚೆಗೆ ವ್ಯಕ್ತಪಡಿಸಿತ್ತು. ಆದರೆ ಇದಕ್ಕೆ ಆರ್‌ಬಿಐನ ನಿರ್ಗಮಿತ ಗವರ್ನರ್‌ ಊರ್ಜಿತ್‌ ಪಟೇಲ್‌ ಒಪ್ಪಿರಲಿಲ್ಲ. ಅತ್ಯಂತ ಆಪತ್ಕಾಲೀನ ಸಂದರ್ಭದಲ್ಲಿ ಬಳಕೆಯಾಗಬೇಕಾದ ಈ ಹಣವನ್ನು ನೀಡಲಾಗದು ಎಂದು ಖಂಡತುಂಡವಾಗಿ ಹೇಳಿದ್ದರು ಎನ್ನಲಾಗಿದ್ದು, ಇದು ಸರ್ಕಾರ-ಆರ್‌ಬಿಐ ತಿಕ್ಕಾಟಕ್ಕೆ ಕಾರಣವಾಗಿತ್ತು.

ಆದರೆ ಈಗ ಊರ್ಜಿತ್‌ ಪಟೇಲ್‌ ಆರ್‌ಬಿಐಗೆ ರಾಜೀನಾಮೆ ನೀಡಿದ್ದು, ಇವರ ಬದಲು ಸರ್ಕಾರಕ್ಕೆ ಅತ್ಯಂತ ಆಪ್ತರಾದ ಶಕ್ತಿಕಾಂತ ದಾಸ್‌ ಅವರ ನೇಮಕವಾಗಿದೆ. ಹೀಗಾಗಿ ಆರ್‌ಬಿಐ ಮೀಸಲು ನಿಧಿಯಲ್ಲಿರುವ ಒಟ್ಟು ಮೊತ್ತದ ಪೈಕಿ 4 ಲಕ್ಷ ಕೋಟಿ ರು.ಗಳನ್ನು ಸರ್ಕಾರವು ರೈತರ ಸಾಲ ಮನ್ನಾಗೆ ಬಳಸಿಕೊಂಡರೂ ಅಚ್ಚರಿಯಿಲ್ಲ ಎನ್ನಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ವೇದಿಕೆಯಲ್ಲಿ ವಧು ಸದ್ದಿಲ್ಲದೆ ಮಾಡಿದ ಅದೊಂದು ಕೆಲಸ ಇಂಟರ್‌ನೆಟ್‌ನಲ್ಲಿ ಫುಲ್ ವೈರಲ್ ಆಯ್ತು..