ಗುಜರಾತನ್ನು ಮೋದಿ ಉದ್ಯಮಿಗಳಿಗೆ ಮಾರಿದ್ದಾರೆ: ರಾಹುಲ್ ಗಾಂಧಿ

Published : Nov 29, 2017, 09:45 PM ISTUpdated : Apr 11, 2018, 12:35 PM IST
ಗುಜರಾತನ್ನು ಮೋದಿ ಉದ್ಯಮಿಗಳಿಗೆ ಮಾರಿದ್ದಾರೆ: ರಾಹುಲ್ ಗಾಂಧಿ

ಸಾರಾಂಶ

ಗುಜರಾತ್ ಚುನಾವಣೆಗೆ ವಾರವಷ್ಟೇ ಬಾಕಿ ಉಳಿದಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪ್ರತಿಷ್ಠೆಯ ಕಣವಾಗಿದೆ. ಹಾಗಾಗಿ ಉಭಯ ಪಕ್ಷಗಳು ಬಿರುಸಿನ ಪ್ರಚಾರ, ರ್ಯಾಲಿ ನಡೆಸುತ್ತಿವೆ. ಪರಸ್ಪರ ಟೀಕೆ, ಕೆಸರೆರಚಾಟದ, ಆರೋಪ ಮಾಡುವ ಮೂಲಕ ಮತದಾರರನ್ನು ತಮ್ಮತ್ತ ಸೆಳೆಯುವಲ್ಲಿ ಪ್ರಯತ್ನಿಸುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಹಾಗೂ ಪತೇದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ರ್ಯಾಲಿಯಲ್ಲಿ ಭಾಗವಹಿಸಿದರು.

ಗುಜರಾತ್ (ನ.29): ಗುಜರಾತ್ ಚುನಾವಣೆಗೆ ವಾರವಷ್ಟೇ ಬಾಕಿ ಉಳಿದಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪ್ರತಿಷ್ಠೆಯ ಕಣವಾಗಿದೆ. ಹಾಗಾಗಿ ಉಭಯ ಪಕ್ಷಗಳು ಬಿರುಸಿನ ಪ್ರಚಾರ, ರ್ಯಾಲಿ ನಡೆಸುತ್ತಿವೆ. ಪರಸ್ಪರ ಟೀಕೆ, ಕೆಸರೆರಚಾಟದ, ಆರೋಪ ಮಾಡುವ ಮೂಲಕ ಮತದಾರರನ್ನು ತಮ್ಮತ್ತ ಸೆಳೆಯುವಲ್ಲಿ ಪ್ರಯತ್ನಿಸುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಹಾಗೂ ಪತೇದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ರ್ಯಾಲಿಯಲ್ಲಿ ಭಾಗವಹಿಸಿದರು.

ರಾಹುಲ್ ಗಾಂಧಿ ರ್ಯಾಲಿಯಲ್ಲಿ ಭಾಷಣ ಮಾಡುತ್ತಾ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರತ್ಯಾರೋಪ ಮಾಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ. ಕೇವಲ 10 ದಿನಗಳೊಳಗೆ ನಾವು ರೈತರ ಸಾಲ ಮನ್ನಾ ಮಾಡುತ್ತೇವೆ. ನೀವೇನು ಬಯಸುತ್ತೀರೋ ಹಾಗೆಯೇ ನಾವು ಆಡಳಿತ ನಡೆಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದರು.

ಇನ್ನು ಮುಂದುವರೆದು, ಕಳೆದ 2 ದಶಕಗಳಲ್ಲಿ ಗುಜರಾತನ್ನು ಮೋದಿ ಉದ್ಯಮಿಗಳಿಗೆ ಮಾರಾಟ ಮಾಡಿದ್ದಾರೆ. ಡಿಮಾನೆಟೈಸೇಶನ್ ಸಂದರ್ಭದಲ್ಲಿ ಇಡೀ ದೇಶ ಸರತಿ ಸಾಲಿನಲ್ಲಿ ನಿಲ್ಲುವಂತೆ ಮಾಡಿದರು. ಅವರ ಸೂಟು-ಬೂಟು ಸ್ನೇಹಿತರಾದ ಅದ್ನಾನಿಯವರು ಸಾಲಿನಲ್ಲಿ ನಿಂತಿದ್ದನ್ನು ನೀವು ನೋಡಿದ್ದೀರಾ ಎಂದು  ಜನರನ್ನು ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ