
ಬೆಂಗಳೂರು(ಅ.02): ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಮುಂಜಾನೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಮೋದಿ ಜೊತೆ ಕೆಲ ನಿಮಿಷಗಳ ಕಾಲ ಮಾತನಾಡಿದ ದೇವೇಗೌಡರು, ನೀರು ಹಂಚಿಕೆ ಮತ್ತು ನಿರ್ವಹಣಾ ಮಂಡಳಿ ರಚನೆ ಸಂಬಂಧ ಚರ್ಚೆ ನಡೆಸಿದ್ದಾರೆ. ದೂರವಾಣಿಯಲ್ಲಿ ಮಾತನಾಡಿದ ವಿಷಯಗಳ ಬಗ್ಗೆ ದೇವೇಗೌಡರು ಬಹಿರಂಗಪಡಿಸಿಲ್ಲ.
ಈ ಕುರಿತು, ಪ್ರತಿಕ್ರಿಯಿಸಿದ ದೇವೇಗೌಡರು, ಪ್ರಧಾನಿ ಮೋದಿಯವರು ಹಾಗೂ ಸಿಎಂ ಸಿದ್ದರಾಮಯ್ಯನ ಮೇಲೆ ವಿಶ್ವಾಸವಿದೆ. ನಾಳೆ ವಿಧಾನಮಂಡಲದ ಉಭಯ ಸದನಗಳಲ್ಲಿ ಮೂರು ರಾಜಕೀಯ ಪಕ್ಷಗಳು ಏನು ನಿರ್ಧಾರ ಕೈಗೊಳ್ಳುತ್ತವೆ ನೋಡೋಣ ಅಂತಾ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.