
ನವದೆಹಲಿ (ಜೂ.29): ಗೋ ರಕ್ಷಣೆ ಮಾಡುವ ಹೆಸರಲ್ಲಿ ಜನರನ್ನು ಕೊಲ್ಲುವುದನ್ನು ಒಪ್ಪಲಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗೋ ರಕ್ಷಕರಿಗೆ ಖಡಕ್ ಸಂದೇಶ ನೀಡಿದ್ದಾರೆ.
ಅಹ್ಮದಾಬಾದ್’ನ ಸಾಬರಮತಿ ಆಶ್ರಮದ ಶತಮಾನೋತ್ಸವ ಸಂದರ್ಭದಲ್ಲಿ ಮಾತನಾಡುತ್ತಾ, ಗೋವಿನ ಹೆಸರಿನಲ್ಲಿ ಜನರನ್ನು ಹತ್ಯೆ ಮಾಡುವುದು ಒಪ್ಪತಕ್ಕ ಮಾತಲ್ಲ. ಇದನ್ನು ನಾನು ಖಂಡಿಸುತ್ತೇನೆ. ಕಾನೂನನ್ನು ಕೈಗೆತ್ತಿಕೊಳ್ಳಲು ಯಾರಿಗೂ ಅಧಿಕಾರವಿಲ್ಲ. ನಾವು ಅಹಿಂಸೆಯ ನೆಲದಲ್ಲಿದ್ದೇವೆ. ಹಿಂಸೆಯೇ ಎಲ್ಲ ಸಮಸ್ಯೆಗೂ ಉತ್ತರವಲ್ಲ. ಮಹಾತ್ಮ ಗಾಂಧಿಜಿಯವರು ಇದನ್ನು ಒಪ್ಪುತ್ತಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಿನೋಬಾ ಭಾವೆ ಮತ್ತು ಮಹಾತ್ಮ ಗಾಂಧೀಜಿ ಗೋ ಭಕ್ತಿಯ ಬಗ್ಗೆ ದಾರಿ ತೋರಿಸಿಕೊಟ್ಟಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ.
ಹೋ ಹತ್ಯೆ ಮಾಡಿದ್ದಾರೆನ್ನುವ ಆರೋಪದಲ್ಲಿ ಸ್ವಯಂ ಘೋಷಿತ ಗೋ ರಕ್ಷಕರು ಅಂತವರನ್ನು ಹತ್ಯೆ ಮಾಡಿರುವ ಅಮಾನವೀಯ ಘಟನೆ ಇತ್ತೀಚಿಗೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮೋದಿಯವರು ಈ ಮಾತನ್ನು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.