
ಕೊಚ್ಚಿ/ತಿರುಪತಿ[ಜೂ.07]: ಪ್ರಧಾನಿ ನರೇಂದ್ರ ಮೋದಿ ಈ ವಾರ ದಕ್ಷಿಣ ಭಾರತದಲ್ಲಿ ಟೆಂಪಲ್ ರನ್ ನಡೆಸಲಿದ್ದು, ಪ್ರಸಿದ್ಧ ದೇವಸ್ಥಾನಗಳಾದ ಕೇರಳದ ಗುರುವಾಯೂರು ಶ್ರೀಕೃಷ್ಣ ಹಾಗೂ ಆಂಧ್ರದ ತಿರುಪತಿ, ತಿರುಮಲ ವೆಂಕಟೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.
ತಮ್ಮ ಎರಡನೇ ಅವಧಿಯಲ್ಲಿ ದಕ್ಷಿಣ ಭಾರತದ ಈ ದೇವಸ್ಥಾನಗಳಿಗೆ ಅವರ ಮೊದಲ ಭೇಟಿ ಇದಾಗಿದೆ. ಶುಕ್ರವಾರ ತಡರಾತ್ರಿ ಗುರುವಾಯೂರಿಗೆ ಆಗಮಿಸಿ ವಾಸ್ತವ್ಯ ಮಾಡಿ ಶನಿವಾರ ಬೆಳಗ್ಗೆ ಶ್ರೀ ಕೃಷ್ಣನ ದರ್ಶನ ಪಡೆಯಲಿದ್ದಾರೆ. ಬಳಿಕ ಭಾನುವಾರ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
ತಿರುಮಲ ಭೇಟಿ ವೇಳೆ ಆಂಧ್ರ ಸಿಎಂ ವೈಎಸ್‌ಆರ್ ಜಗನ್ಮೋಹನ್ ರೆಡ್ಡಿ, ರಾಜ್ಯಪಾಲ ಇಎಸ್‌ಎಲ್ ನರಸಿಂಹನ್ ಉಪಸ್ಥಿತರಿರುವ ಸಾಧ್ಯತೆ ಇದೆ ಎನ್ನಲಾಗಿದ್ದು, ಅಗತ್ಯ ಭದ್ರತಾ ಮತ್ತಿತರ ಕ್ರಮಗಳಿಗೆ ಸೂಚನೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.