ಅಟಲ್ ನಿಧನಕ್ಕೆ ಗಣ್ಯರ ಕಂಬನಿ: ಯಾರು, ಏನಂದ್ರು?

Published : Aug 16, 2018, 06:49 PM ISTUpdated : Sep 09, 2018, 08:58 PM IST
ಅಟಲ್ ನಿಧನಕ್ಕೆ ಗಣ್ಯರ ಕಂಬನಿ: ಯಾರು, ಏನಂದ್ರು?

ಸಾರಾಂಶ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಇನ್ನಿಲ್ಲ! ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ಗಣ್ಯರ ಕಂಬನಿ! ಟ್ವಿಟ್ಟರ್ ಮೂಲಕ ಕಂಬನಿ ಮಿಡಿದ ಗಣ್ಯರು! ವಾಜಪೇಯಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ  

ನವದೆಹಲಿ(ಆ.16): ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಸ್ತಂಗತರಾಗಿದ್ದಾರೆ. ಭಾರತ ರಾಜಕಾರಣದ ಅಜಾತಶತ್ರು ಎಂದೇ ಹೆಸರುಗಳಿಸಿದ್ದ ವಾಜಪೇಯಿ ದೈಹಿಕವಾಗಿ ನಮ್ಮನ್ನು ಅಗಲಿದ್ದರೂ, ಅವರ ಆದರ್ಶ, ಅವರು ಹಾಕಿಕೊಟ್ಟ ದಾರಿ ಭಾರತಕ್ಕೆ ಎಂದೆಂದಿಗೂ ಮಾದರಿಯಾಗಿರುತ್ತದೆ.

ಇನ್ನು ಅಟಲ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದು, ಟ್ವಿಟ್ಟರ್ ಮೂಲಕ ವಾಜಪೇಯಿ ಅವರನ್ನು ಸ್ಮರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ವಾಜಪೇಯಿ ನಿಧನಕ್ಕೆ ಸಂತಾಪ ಸೂಚಿಸಿದ್ದು, ಅಟಲ್ ನಿಧನದಿಂದ ಭಾರತದ ರಾಜಕಾರಣದಲ್ಲಿ ಶೂನ್ಯ ಆವರಿಸಿದೆ ಎಂದು ಹೇಳಿದ್ದಾರೆ.
 

ಇನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ವಾಜಪೇಯಿ ನಿಧನಕ್ಕೆ ಸಂತಾಪ ಸೂಚಿಸಿದ್ದು, ಭಾರತ ತನ್ನ ಹೆಮ್ಮೆಯ ಪುತ್ರನನ್ನು ಕಳೆದುಕೊಂಡಿದೆ ಎಂದು ಕಂಬನಿ ಮಿಡಿದಿದ್ದಾರೆ.

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕೂಡ ವಾಜಪೇಯಿ ನಿಧನಕ್ಕೆ ಕಂಬನಿ ಮಿಡಿದಿದ್ದು, ಸಂತಾಪ ಸೂಚಿಸಲು ತಮ್ಮ ಬಳಿ ಶಬ್ದಗಳಿಲ್ಲ ಎಂದು ಕಂಬನಿ ಮಿಡಿದಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷ ಬಿಎಸ್. ಯಡಿಯೂರಪ್ಪ ಕೂಡ ವಾಜಪೇಯಿ ನಿಧನಕ್ಕೆ ಸಂತಾಪ ಸೂಚಿಸಿದ್ದು, ವಾಜಪೇಯಿ ತಮಗೆ ರಾಜಕೀಯ ಪ್ರೇರಣೆಯಾಗಿದ್ದರು ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಸಿಎಂ ದೆವೇಂದ್ರ ಫಡ್ನವೀಸ್ ಕೂಡ ವಾಜಪೇಯಿ ನಿಧನಕ್ಕೆ ಕಂಬನಿ ಮಿಡಿದಿದ್ದು, ವಾಜಪೇಯಿ ಇನ್ನಿಲ್ಲ ಎಂಬ ಸುದ್ದಿಯನ್ನು ನಂಬಲಾಗುತ್ತಿಲ್ಲ ಎಂದು ಹೇಳಿದ್ದಾರೆ.

ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಕೂಡ ವಾಜಪೇಯಿ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದು, ದೇಶ ಇಂದು ಓರ್ವ ಉತ್ತಮ ವ್ಯಕ್ತಿಯನ್ನು ಕಳೆದುಕೊಂಡಿದೆ ಎಂದು ಕಂಬನಿ ಮಿಡಿದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು