ಕಾಂಗ್ರೆಸ್‌ಗೆ ಮೈತ್ರಿಗೆ ಗುಡ್ ಬೈ ಹೇಳಲು ನಿರ್ಧರಿಸಿದ ಪಕ್ಷ

By Web DeskFirst Published Jun 5, 2019, 10:27 AM IST
Highlights

ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ಪಕ್ಷವೊಂದು ಮುರಿದುಕೊಳ್ಳಲು ಸಜ್ಜಾಗಿದೆ.

ನವದೆಹಲಿ :  ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬರುತ್ತಲೇ, ವಿಪಕ್ಷಗಳ ಮೈತ್ರಿಕೂಟದಲ್ಲಿ ಮತ್ತಷ್ಟು ಬಿರುಕು ಕಾಣಿಸಿದೆ. ಉ.ಪ್ರದೇಶದಲ್ಲಿ ಎಸ್‌ಪಿ- ಬಿಎಸ್ಪಿ ಮೈತ್ರಿ ಮುರಿದುಬಿದ್ದಿದೆ, ರಾಜಸ್ಥಾನದಲ್ಲಿ ಸಿಎಂ- ಡಿಸಿಎಂ ನಡುವೆ ವಾಕ್ಸಮರ ಆರಂಭವಾಗಿದೆ.

ಮಹಾರಾಷ್ಟ್ರದಲ್ಲಿ 4 ಕಾಂಗ್ರೆಸ್ ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಮತ್ತೊಂದೆಡೆ ಕಾಶ್ಮೀರದಲ್ಲಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಹೊರಗಿಟ್ಟು ಚುನಾವಣೆಗೆ ಸ್ಪರ್ಧಿಸಲು ನ್ಯಾಷನಲ್ ಕಾನ್ಫರೆನ್ಸ್ ಕೂಡಾ ನಿರ್ಧರಿಸಿದೆ ಎನ್ನಲಾಗಿ

ವರ್ಷಾಂತ್ಯಕ್ಕೆ ನಡೆಯಲಿದೆ ಎನ್ನಲಾದ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅನ್ನು ಮೈತ್ರಿಕೂಟದಿಂದ ಹೊರಗಿಡಲು ನ್ಯಾಷನಲ್‌ ಕಾನ್ಫರೆನ್ಸ್‌ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. 

ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌ 6 ಸ್ಥಾನಗಳಲ್ಲಿ ಸ್ಪರ್ಧಿಸಿ 3 ಸ್ಥಾನ ಗೆದ್ದಿತ್ತು. ಆದರೆ ಕಾಂಗ್ರೆಸ್‌ ಒಂದೆ ಒಂದು ಸ್ಥಾನ ಗೆಲ್ಲುವಲ್ಲೂ ಸಫಲವಾಗಿರಲಿಲ್ಲ.

click me!