ಸಿನಿಯರ್ ಮತ್ತು ಜ್ಯೂನಿಯರ್ ಅಬ್ದುಲ್ಲಾರನ್ನು ಭೇಟಿಯಾದ ಎನ್‌ಸಿ ನಿಯೋಗ!

Published : Oct 05, 2019, 07:36 PM IST
ಸಿನಿಯರ್ ಮತ್ತು ಜ್ಯೂನಿಯರ್ ಅಬ್ದುಲ್ಲಾರನ್ನು ಭೇಟಿಯಾದ ಎನ್‌ಸಿ ನಿಯೋಗ!

ಸಾರಾಂಶ

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ|  ಗೃಹ ಬಂಧನದಲ್ಲಿರುವ ಪ್ರಮುಖ ಕಾಶ್ಮೀರಿ ನಾಯಕರು| ಫಾರೂಖ್ ಅಬ್ದುಲ್ಲಾ ಹಾಗೂ ಓಮರ್ ಅಬ್ದುಲ್ಲಾ ಭೇಟಿಗೆ ಎನ್‌ಸಿ ನಿಯೋಗಕ್ಕೆ ಅವಕಾಶ| ಪಕ್ಷದ ಉನ್ನತ ನಾಯಕರನ್ನು ಭೇಟಿಯಾಗಲಿರುವ ದೇವೇಂದ್ರ ಸಿಂಗ್ ರಾಣಾ ನೇತೃತ್ವದ ಎನ್‌ಸಿ ನಿಯೋಗ|

ಶ್ರೀನಗರ(ಅ.05): ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಬಳಿಕ, ಕಾಶ್ಮೀರಿ ನಾಯಕರು ಗೃಹ ಬಂಧನದಲ್ಲಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ.

ಕಣಿವೆಯಲ್ಲಿನ ವಾತಾವರಣ ಸಾಮಾನ್ಯ ಸ್ಥಿತಿಗೆ ಮರಳುತ್ತಿದ್ದಂತೇ ಹಂತ ಹಂತವಾಗಿ ನಿಷೇಧಾಜ್ಞೆಯನ್ನು ತೆರವುಗೊಳಿಸುತ್ತಿರುವ ಕೇಂದ್ರ ಸರ್ಕಾರ, ಗೃಹ ಬಂಧನದ ನಿಯಮವನ್ನೂ ಸಡಿಲಗೊಳಿಸುತ್ತಿದೆ.

ಅದರಂತೆ ಕಳೆದೆರಡು ತಿಂಗಳಿನಿಂದ ಗೃಹ ಬಂಧನದಲ್ಲಿರುವ ನ್ಯಾಶನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಖ್ ಅಬ್ದುಲ್ಲಾ ಹಾಗೂ ಪುತ್ರ ಓಮರ್ ಅಬ್ದುಲ್ಲಾ ಅವರನ್ನು ಭೇಟಿ ಮಾಡಲು ಪಕ್ಷದ ನಿಯೋಗಕ್ಕೆ ಅನುಮತಿ ನೀಡಲಾಗಿದೆ.

ಪಕ್ಷದ ಉನ್ನತ ನಾಯಕರನ್ನು ಭೇಟಿ ಮಾಡಲು ಅವಕಾಶ ನೀಡುವಂತೆ ಸ್ಥಳೀಯ ಅಧ್ಯಕ್ಷ ದೇವೇಂದ್ರ ಸಿಂಗ್ ರಾಣಾ ಸರ್ಕಾರಕ್ಕೆ ಮನವಿ ಮಾಡಿದ್ದರು. ರಾಣಾ ಮನವಿಯನ್ನು ಪುರಸ್ಕರಿಸಿರುವ ಸರ್ಕಾರ, ಇಬ್ಬರೂ ನಾಯಕರ ಭೇಟಿಗೆ ನಿಯೋಗಕ್ಕೆ ಅವಕಾಶ ಕಲ್ಪಿಸಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿ ಬಳಿಕ,  ಕಾಶ್ಮೀರಿ ನಾಯಕರು ಗೃಹ ಬಂಧನದಲ್ಲಿದ್ದು, ಪ್ರಮುಖವಾಗಿ ಮಾಜಿ ಸಿಎಂಗಳಾದ ಫಾರೂಖ್ ಅಬ್ದುಲ್ಲಾ, ಓನರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸೇರಿದಂತೆ ಹಲವು ಪ್ರಮುಖ ನಾಯಕರ ಮೇಲೆ ತೀವ್ರ ನಿಗಾ ಇಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಬ್ಬಲ್ಲಿ ಮೊಬೈಲ್‌ ತರಲುಹೋದ ಕನ್ನಡಿಗ ಬಲಿ, ಗೋವಾ ಪಬ್ ದುರಂತಕ್ಕೆ ಕಾರಣವೇನು?
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 6 !