ಸ್ಥಳೀಯ ಸಂಸ್ಥೆ ಎಲೆಕ್ಷನ್ ಬಹಿಷ್ಕಾರ

By Web DeskFirst Published Sep 6, 2018, 11:04 AM IST
Highlights

ವಿಶೇಷ ಸವಲತ್ತು ಒದಗಿಸುವ ಸಂವಿಧಾನದ 35 -ಎ ಪರಿಚ್ಛೇದ ರಕ್ಷಿಸಬೇಕು ಎಂದು ಆಗ್ರಹಿಸಿ ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷ ಸ್ಥಳೀಯ ಸಂಸ್ಥೆ ಹಾಗೂ ಪಂಚಾಯಿತಿ ಚುನಾವಣೆಗಳನ್ನು ಬಹಿಷ್ಕರಿಸುವ ನಿರ್ಧಾರ ಕೈಗೊಂಡಿದೆ.

ಶ್ರೀನಗರ: ಜಮ್ಮು-ಕಾಶ್ಮೀರದ ಕಾಯಂ ನಿವಾಸಿಗಳಿಗೆ ವಿಶೇಷ ಸವಲತ್ತು ಒದಗಿಸುವ ಸಂವಿಧಾನದ 35 -ಎ ಪರಿಚ್ಛೇದ ರಕ್ಷಿಸಬೇಕು ಎಂದು ಆಗ್ರಹಿಸಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷ ಸ್ಥಳೀಯ ಸಂಸ್ಥೆ ಹಾಗೂ ಪಂಚಾಯಿತಿ ಚುನಾವಣೆಗಳನ್ನು ಬಹಿಷ್ಕರಿಸುವ ನಿರ್ಧಾರ 
ಕೈಗೊಂಡಿದೆ. ಈ ಪರಿಚ್ಛೇದದ ವಿರುದ್ಧ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಕೆಯಾಗಿದೆ.

ಹೀಗಾಗಿ 35 -ಎ ಪರಿಚ್ಛೇದ ರಕ್ಷಣೆ ಕುರಿತು ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸದೇ ಹೋದಲ್ಲಿ ನಗರ ಸ್ಥಳೀಯ ಸಂಸ್ಥೆ ಹಾಗೂ ಪಂಚಾಯಿತಿ ಚುನಾವಣೆ ಬಹಿಷ್ಕರಿಸಲು ನ್ಯಾಷನಲ್ ಕಾನ್ಫರೆನ್ಸ್ ನ ಕೋರ್ ಸಮಿತಿ ಸರ್ವಾನುಮತದ ನಿರ್ಣಯ ಕೈಗೊಂಡಿದೆ.

click me!