ಎತ್ತಿನಹೊಳೆ ಕಾಮಗಾರಿಗೆ ಷರತ್ತುಬದ್ಧ ಅನುಮತಿ

By Suvarna Web DeskFirst Published Oct 6, 2017, 8:22 PM IST
Highlights

ಎತ್ತಿನಹೊಳೆ ಯೋಜನೆ ಅನುಷ್ಠಾನದಿಂದ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ದೂರಿ ಸಾಮಾಜಿಕ ಕಾರ್ಯಕರ್ತ ಕೆಎನ್ ಸೋಮಶೇಖರ್ ಸಲ್ಲಿಸಿದ್ದ ಅರ್ಜಿಯನ್ನು ಎನ್ ಜಿಟಿ ತಿರಸ್ಕರಿಸಿದೆ.

ನವದೆಹಲಿ(ಅ.06): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಎತ್ತಿನಹೊಳೆ ಯೋಜನೆ ಮೊದಲ ಹಂತದ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಷರತ್ತುಬದ್ಧ ಅನುಮತಿ ನೀಡಿದೆ. ಎತ್ತಿನಹೊಳೆ ಯೋಜನೆ ಅನುಷ್ಠಾನದಿಂದ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ದೂರಿ ಸಾಮಾಜಿಕ ಕಾರ್ಯಕರ್ತ ಕೆಎನ್ ಸೋಮಶೇಖರ್ ಸಲ್ಲಿಸಿದ್ದ ಅರ್ಜಿಯನ್ನು ಎನ್ ಜಿಟಿ ತಿರಸ್ಕರಿಸಿದೆ. ಎತ್ತಿನಹೊಳೆ ವಿರುದ್ಧ ಸಲ್ಲಿಸಿರುವ ಇನ್ನೂ 2 ಅರ್ಜಿ ವಿಚಾರಣೆ ಬಾಕಿ ಇದೆ. 3 ಅರ್ಜಿಗಳಲ್ಲಿ ಒಂದು ಅರ್ಜಿ ವಿಚಾರಣೆ ನಡೆಸಿದ ಎನ್ ಜಿಟಿ ಇಂದು ಕೇವಲ ಒಂದು ಅರ್ಜಿಯ ಕುರಿತ ತೀರ್ಪು ಪ್ರಕಟಿಸಿದೆ. ಷರತ್ತುಗಳನ್ನು ಅಂತಿಮ ತೀರ್ಪಿನಲ್ಲಿ ಪ್ರಕಟಿಸುವುದಾಗಿ ಎನ್ ಜಿಟಿ ಪೀಠ ಸ್ಪಷ್ಟಪಡಿಸಿದೆ. ನೇತ್ರಾವತಿ ನದಿ ತಿರುವು ಯೋಜನೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು, ಪರಿಸರವಾದಿಗಳು, ಬಿಜೆಪಿ ಸೇರಿದಂತೆ ಸಾಮಾಜಿಕ ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು.

click me!