
ನವದೆಹಲಿ(ನ.15): ಹಳೇ 500, 1000 ರೂಪಾಯಿ ನೋಟು ರದ್ದು ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮತ್ತೆ ಟೋಲ್ ಫ್ರೀ ಅವಧಿ ವಿಸ್ತರಣೆ ಮಾಡಲಾಗಿದೆ.
ಇಂದಿನಿಂದ ನವೆಂಬರ್18ರ ಮಧ್ಯರಾತ್ರಿವರೆಗೂ ಟೋಲ್'ಗಳಲ್ಲಿ ಯಾವುದೇ ಶುಲ್ಕ ಸಂಗ್ರಹಿಸದಂತೆ ಸೂಚಿಸಲಾಗಿದೆ. ಹೀಗಾಗಿ ಟೋಲ್'ಬೂತ್ಗಳಲ್ಲಿ ಯಾವುದೇ ಶುಲ್ಕ ಕಟ್ಟುವಂತಿಲ್ಲ, ತೆಗೆದುಕೊಂಡರೆ ಸೂಕ್ತ ಕ್ರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಹಳೇ ನೋಟುಗಳನ್ನು ಸ್ವೀಕರಿಸದೇ ಇದ್ದುದ್ದರಿಂದ ಟೋಲ್'ಗಳಲ್ಲಿ ಭಾರೀ ಸಮಸ್ಯೆಯಾಗಿತ್ತು. ಭಾರೀ ಟ್ರಾಫಿಕ್ ಜಾಮ್ಗೆ ಕಾರಣವಾಗಿತ್ತು. ಹೀಗಾಗಿ ಕೇಂದ್ರ ಸರ್ಕಾರ ಟೋಲ್ ಫ್ರೀ ವ್ಯವಸ್ಥೆಯನ್ನು ಇದೇ ತಿಂಗಳ 18ರ ಮಧ್ಯರಾತ್ರಿವರೆಗೂ ವಿಸ್ತರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.