
ಕಾರವಾರ[ಏ.26]: ಭಾರತದ ನೌಕಾಸೇನೆಯ ಯುದ್ಧನೌಕೆ INS ವಿಕ್ರಮಾದಿತ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ನಂದಿಸುವ ಕಾರ್ಯದ ನೇತೃತ್ವ ವಜಹಿಸಿದ್ದ ನೌಕಾಧಿಕಾರಿ ಲೆಫ್ಟಿನೆಂಟ್ ಕಮಾಂಡರ್ ಡಿಎಸ್ ಚೌಹಾಣ್ ಸಾವನ್ನಪ್ಪಿದ್ದಾರೆ.
"
ಕಾರವಾರದ ಬಂದರಿನಲ್ಲಿದ್ದ ಯುದ್ಧನೌಕೆ INS ವಿಕ್ರಮಾದಿತ್ಯದಲ್ಲಿ ಇಂದು ಶುಕ್ರವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು ನಂದಿಸುತ್ತಿದ್ದ ತಂಡದ ನೇತೃತ್ವ ವಹಿಸಿಕೊಂಡಿದ್ದ ನೌಕಾಧಿಕಾರಿ ಡಿಎಸ್ ಚೌಹಾಣ್ ನೌಕೆಯಲ್ಲಿ ಹಬ್ಬಿಕೊಂಡಿದ್ದ ದಟ್ಟ ಹೊಗೆಯಿಂದಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಕೂಡಲೇ ಅವರನ್ನು ನಗರದ ನೌಕಾಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿಯಲಿಲ್ಲ ಎಂದು ನೌಕಾದಳದ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಕುರಿತಾಗಿ ಪ್ರತಿಕ್ರಿಯಿಸಿರುವ ನೌಕಾಧಿಕಾರಿಗಳು 'ನೌಕೆಯಲ್ಲಿ ವ್ಯಾಪಿಸಿದ್ದ ಬೆಂಕಿ ನಿಯಂತ್ರಿಸಲು ತಂಡ ಯಶಸ್ವಿಯಾಗಿದೆ. ಇನ್ನು ಈ ಅನಾಹುತ ಸಂಭವಿಸಲು ಕಾರಣವೇನು ಎಂದು ತಿಳಿದು ಬಂದಿಲ್ಲವಾದರೂ, ಈ ಕುರಿತಾಗಿ ತನಿಖೆ ನಡೆಸುವಂತೆ ಆದೇಶ ನೀಡಲಾಗಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಹಡಗಿನ ಸಾಮರ್ಥ್ಯಕ್ಕೆ ಯಾವುದೇ ಹಾನಿಯಾಗದಂತೆ ಕ್ರಮ ಕೈಗೊಂಡಿದ್ದೇವೆ' ಎಂದಿದ್ದಾರೆ.
INS ವಿಕ್ರಮಾದಿತ್ಯ ಯುದ್ಧ ನೌಕೆಯನ್ನು 2014ರಲ್ಲಿ ರಷ್ಯಾದಿಂದ ತರಿಸಿಕೊಳ್ಳಲಾಗಿತ್ತು. 284 ಮೀ ಉದ್ದ ಹಾಗೂ 60 ಮೀ ಅಗಲವಿರುವ ಈ ಯುದ್ಧನೌಕೆ ಒಟ್ಟು 40 ಸಾವಿರ ಟನ್ ಭಾರ ಹೊರುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಇದು ಭಾರತದ ಅತಿ ದೊಡ್ಡ ಯುದ್ಧ ನೌಕೆಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.