
ಅಮೃತಸರ್(ನ.30): ಇತ್ತೀಚೆಗೆ ನಡೆದ ಕರ್ತಾರ್ ಪುರ್ ಕಾರಿಡಾರ್ ಯೋಜನೆ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಲು ಮಾಜಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು ಪಾಕಿಸ್ತಾನಕ್ಕೆ ತೆರಳಿದ್ದರ ಹಿಂದೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಆದೇಶವೇ ಕಾರಣವೆನ್ನುವುದು ಈಗ ಬಹಿರಂಗವಾಗಿದೆ.
ಸಿಧು ಸ್ವತಃ ಈ ಕುರಿತು ಹೇಳಿಕೆ ನೀಡಿದ್ದು ‘ರಾಹುಲ್ ಗಾಂಧಿ ನನ್ನನ್ನು ಕರ್ತಾರ್ ಪುರ ಕಾರಿಡಾರ್ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಪಾಕ್ ಗೆ ತೆರಳುವಂತೆ ಹೇಳಿದ್ದರು’ ಎಂದು ಹೇಳಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರಿಗೆ ಸಿಧು ಪಾಕಿಸ್ತಾನಕ್ಕೆ ತೆರಳುವ ಬಗ್ಗೆ ಭಿನ್ನಾಭಿಪ್ರಾಯವಿತ್ತು ಎನ್ನಲಾಗಿದ್ದು, ಈ ಸಂಬಂಧ ಅವರು ಸಿಧು ಪಾಕ್ ಭೇಟಿಯನ್ನು ಮಾನ್ಯ ಮಾಡಲು ನಿರಾಕರಿಸಿದ್ದರು.
ಅಮೃತಸರ್ ನಲ್ಲಿ ನಡೆದ ಧಾರ್ಮಿಕ ಸಭೆ ಮೇಲೆ ಪಾಕ್ ಐಎಸ್ ಐ ಪ್ರಚೋದಿತ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದರು. ಈ ದಾಳಿಉಯಲ್ಲಿ ಮೂವರು ಸಾವನ್ನಪ್ಪಿದ್ದರು. ಹೀಗಾಗಿ ತಮ್ಮ ಸಂಪುಟ ಸಹೋದ್ಯೋಗಿಯಾಗಿರುವ ಸಿಧು ಪಾಕ್ ಭೇಟಿಯನ್ನು ತಡೆಯಲು ಅವರು ಪ್ರಯತ್ನಿಸಿದ್ದರು.
‘ರಾಹುಲ್ ಗಾಂಧಿ ನನ್ನ ನಾಯಕ. ಅವರೇ ನನ್ನನ್ನು ಪಾಕಿಸ್ತಾನಕ್ಕೆ ಕಳಿಸಿದ್ದರು’ ಎಂದು ಸಿಧು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಸಿಧು ಪಾಕ್ ಭೇಟಿಯನ್ನು 50-100 ಕಾಂಗ್ರೆಸ್ ನಾಯಕರು ಬೆಂಬಲಿಸಿದ್ದಾಗಿ ಸಹ ಅವರು ಸಮರ್ಥನೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.