
ನವದೆಹಲಿ(ನ.02): ನವೆಂಬರ್ 9 ರಂದು ಪಾಕಿಸ್ತಾನದಲ್ಲಿ ನಡೆಯುವ ಕರ್ತಾರ್‌ಪುರ್ ಕಾರಿಡಾರ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಅನುಮತಿ ನೀಡಬೇಕು ಎಂದು ಪಂಜಾಬ್ ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಮನವಿ ಮಾಡಿದ್ದಾರೆ.
ಕರ್ತಾರ್‌ಪುರ ಉದ್ಘಾಟನೆಗೆ ಸಿಂಗ್‌ಗೆ ಇಮ್ರಾನ್ ಅಧಿಕೃತ ಆಹ್ವಾನ!
ಕರ್ತಾರ್‌ಪುರ್: ಗುರು-ಭಕ್ತರನ್ನು ಬೆಸೆಯುವ ಅಪರೂಪದ ಕಾರಿಡಾರ್!
ಈ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರಿಗೆ ಪತ್ರ ಬರೆದಿರುವ ಸಿಧು, ಕರ್ತಾರ್‌ಪುರ್ ಸಾಹಿಬ್ ಕಾರಿಡಾರ್ ಉದ್ಘಾಟನೆಗೆ ಪಾಕಿಸ್ತಾನಕ್ಕೆ ಹೋಗಲು ಅನುಮತಿಗಾಗಿ ಮನವಿ ಮಾಡಿದ್ದಾರೆ.
ಕರ್ತಾರ್‌ಪುರ್ ಕಾರಿಡಾರ್ ಯೋಜನೆಗೆ ಸಹಿ ಹಾಕಿದ ಭಾರತ-ಪಾಕಿಸ್ತಾನ!
ಕಾರಿಡಾರ್ ಉದ್ಘಾಟನೆಗಾಗಿ ಪಾಕಿಸ್ತಾನ ತಮಗೆ ಆಹ್ವಾನ ನೀಡಿದ್ದು, ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಪಾಕ್ ಗೆ ತೆರಳಲು ಅನುಮತಿ ನೀಡಬೇಕು ಎಂದು ಸಿಧು ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.