
ಶಿರಾಡಿ (ಜ.16): ಶಿರಾಡಿ ಗ್ರಾಮದಲ್ಲಿ ಶಂಕಿತ ಶಸ್ತ್ರಧಾರಿ ನಕ್ಸಲರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನಿಂದ ಶಿರಾಡಿ ಭಾಗದ ಕಾಡಿನಲ್ಲಿ ನಕ್ಸಲ್ ಕೂಂಬಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿ ಗ್ರಾಮದಲ್ಲಿ ಬಂದು ತಮ್ಮ ಹೆಸರನ್ನು ಹೇಳಿಕೊಂಡು ತಾವು ನಕ್ಸಲರು ಎಂದು ಹೇಳಿಕೊಂಡ ಹಿನ್ನೆಲೆ ಕೂಂಬಿಂಗ್ ನಡೆಸಲಾಗುತ್ತಿದೆ.
ಲತಾ, ರಾಜೇಶ್ ಮತ್ತು ಪುರುಷೋತ್ತಮ್ ಎಂದು ಹೆಸರು ಉಲ್ಲೆಖ ಮಾಡಿ ಶಿರಾಡಿಯ ಮಿತ್ತಜಲು ಗ್ರಾಮದಲ್ಲಿ ಲೀಲಾ, ಸುರೇಶ್ ಮತ್ತು ಮೋಹನ್ ಎನ್ನುವವರ ಮನೆಗಳಿಗೆ ಭೇಟಿ ನೀಡಿದ್ದರು. ಇವರೆಲ್ಲರೂ ತಮಿಳು, ತುಳು ಹಾಗೂ ಮಲಯಾಳಂ ಭಾಷೆಯಲ್ಲಿ ಮಾತನಾಡುತ್ತಿದ್ದರು. ಅಲ್ಲದೇ ಎಲ್ಲರ ಬಳಿಯೂ ಕೂಡ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಇದ್ದವು ಎಂದು ಹೇಳಿದ್ದರು. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.