
ಬೆಂಗಳೂರು : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಕಳೆದ ಮಂಗಳವಾರ ಬೆಂಗಳೂರಿನಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಎನ್'ಸಿಸಿ ತಂಡವು ಭಾಗವಹಿಸಿರುವ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಗೆ ಎನ್'ಜಿಓ ಒಂದು ನೀಡಿದೆ.
ಸೆ.12ರಂದು ನಡೆದ 'ನಾನೂ ಗೌರಿ' ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ಬೆಂಗಳೂರಿನ ಸೆಂಟ್.ಜೋಸೆಫ್ ಕಾಲೇಜಿನ ವಿದ್ಯಾರ್ಥಿಗಳ ಎನ್'ಸಿಸಿ ತಂಡವು, ಘೋಷಣಾ ಪತ್ರಗಳನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆಯಲ್ಲಿ ತನ್ನ ದನಿಯನ್ನು ಸೇರಿಸಿತ್ತು.
ಎನ್'ಸಿಸಿ ಈ ಕ್ರಮದಿಂದ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಹೇಳಿರುವ ಸಿಟಿಜನ್ ಫಾರ್ ಡೆಮಾಕ್ರಸಿ ಸಂಸ್ಥೆಯು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಮಾನವಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ದೂರು ನೀಡಿದೆ.
ಎನ್'ಸಿಸಿ ಕಾಯ್ದೆ 1948ರ ಪ್ರಕಾರ, ಯಾವುದೇ ವಿದ್ಯಾರ್ಥಿಯು ಎನ್'ಸಿಸಿ ಸಮವಸ್ತ್ರವನ್ನು ಧರಿಸಿ ಪ್ರತಿಭಟನೆಗಳು, ರಾಜಕೀಯ ಸಭೆಗಳಲ್ಲಿ ಭಾಗವಹಿಸುವಂತಿಲ್ಲ.
ಆದರೆ ಸೆಂಟ್ರಲ್ ಕಾಲೇಜು ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸೆಂಟ್ ಜೋಸೆಫ್ ಕಾಲೇಜಿನ ಎನ್'ಸಿಸಿ ತಂಡವು ಪ್ರತಿಭಟನಾಕಾರರ ಪರವಾಗಿ ಚಟುವಟಿಕೆಯಿಂದ ಓಡಾಡುತ್ತಾ, ಕರಪತ್ರಗಳನ್ನು, ಘೋಷಣಾ ಪತ್ರಗಳನ್ನು ಪ್ರದರ್ಶಿಸಿದ್ದರು ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.