
ಹೈದರಾಬಾದ್ : ಎನ್‌ಡಿಎ ಮಿತ್ರಕೂಟದಲ್ಲಿ ಬಿರುಕು ಹೆಚ್ಚುತ್ತಿದ್ದು, ಶಿವಸೇನೆ, ರಾಷ್ಟ್ರೀಯ ಲೋಕಸಮತಾ ಪಕ್ಷದ ಬಳಿಕ ಆಂಧ್ರದ ತೆಲುಗುದೇಶಂ ಪಾರ್ಟಿ, ಎನ್‌ಡಿಎದಿಂದ ಹೊರಬರುವ ಚಿಂತನೆ ಆರಂಭಿಸಿದೆ.
2018ರ ಕೇಂದ್ರ ಬಜೆಟ್ ನಲ್ಲಿ ರಾಜ್ಯವನ್ನು ಕಡೆಗಣಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸಿಎಂ ಚಂದ್ರಬಾಬು ನಾಯ್ಡು , ಭಾನುವಾರ ಪಕ್ಷದ ನಾಯಕರ ಸಭೆ ಕರೆದಿದ್ದಾರೆ.
ಇದರಲ್ಲಿ ಎನ್‌ಡಿಎನಲ್ಲಿ ಮುಂದುವರಿಯಬೇಕೇ ಎಂಬ ಬಗ್ಗೆ ನಿರ್ಧರಿಸಿವುದಾಗಿ ಪಕ್ಷದ ಮೂಲಗಳು ತಿಳಿಸಿವೆ. ಜೊತೆಗೆ ಗುರುವಾರ ರಾತ್ರಿಯೇ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ದೆಹಲಿಯ ಸಂಸದರ ಜೊತೆ ಚರ್ಚೆಯನ್ನೂ ನಡೆಸಿದ್ದಾರೆ. ಇದೇ ವೇಳೆ ಎನ್‌ಡಿಎದಿಂದ ಹೊರಬಂದು, ಮತ್ತೆ ತೃತೀಯ ರಂಗ ರಚಿಸಿ ಅದರ ನೇತೃತ್ವ ವಹಿಸುವ ಗಂಭೀರ ಚಿಂತನೆಯೂ ನಾಯ್ಡು ಅವರಲ್ಲಿದೆ ಎಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.