
ನವದೆಹಲಿ (ಜು.20): 15 ನೇ ರಾಷ್ಟ್ರಪತಿ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ. ಎನ್ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಮೀರಾ ಕುಮಾರ್''ರನ್ನು ಹಿಂದಿಕ್ಕಿ 2 ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ದೆಹಲಿಯ ಸಂಸತ್ ಭವನದಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಸಂಜೆ 5 ಗಂಟೆ ಸುಮಾರಿಗೆ ಫಲಿತಾಂಶ ಪ್ರಕಟಗೊಳ್ಳಲಿದೆ.
ಬಿಹಾರದಲ್ಲಿ ಕೋವಿಂದ್ ಪರ ನಿತೀಶ್ ಬಣ ಮತ ಹಾಕಿದೆ. ಬಿಹಾರ ಹಾಗೂ ಅಸ್ಸಾಂ ರಾಜ್ಯದಲ್ಲಿ ಕೋವಿಂದ್ಗೆ ಮುನ್ನಡೆ ಸಾಧಿಸಿದ್ದಾರೆ. ಅಸ್ಸಾಂನಲ್ಲಿ ಕೋವಿಂದ್ ಪರ 91, ಮೀರಾ ಪರ 25 ಮತ ಬಿದ್ದಿದ್ದರೆ , ಬಿಹಾರದಲ್ಲಿ ಕೋವಿಂದ್ ಪರ 130, ಮೀರಾ ಪರ 109 ಮತ ಬಿದ್ದಿದೆ. ಎನ್'ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದಾ ಗೆಲ್ಲುವುದು ಬಹುತೇಕ ಖಚಿತವಾಗಿದ್ದರೂ ಫಲಿತಾಂಶಕ್ಕಾಗಿ ಸಂಜೆ 5 ಗಂಟೆವರೆಗೆ ಕಾಯಲೇಬೇಕಾಗಿದೆ.
ಜು. 25 ರಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಧಿಕಾರಾವಧಿ ಮುಕ್ತಾಯಗೊಳ್ಳಲಿದ್ದು ರಾಮನಾಥ್ ಕೋವಿಂದ/ಮೀರಾ ಕುಮಾರ್ ಮುಂದಿನ ರಾಷ್ಟ್ರಪತಿಯಾಗಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.