ಅಸಲಿ ಗೋರಕ್ಷಕರನ್ನು ಗುರುತಿಸುವ ಅಗತ್ಯವಿದೆ: ಆರೆಸ್ಸೆಸ್ ಮುಖ್ಯಸ್ಥ ಭಾಗವತ್

Published : Oct 11, 2016, 07:12 AM ISTUpdated : Apr 11, 2018, 01:00 PM IST
ಅಸಲಿ ಗೋರಕ್ಷಕರನ್ನು ಗುರುತಿಸುವ ಅಗತ್ಯವಿದೆ: ಆರೆಸ್ಸೆಸ್ ಮುಖ್ಯಸ್ಥ ಭಾಗವತ್

ಸಾರಾಂಶ

ಗೋರಕ್ಷಣೆಯು ಸಂವಿಧಾನದ ಅವಿಭಾಜ್ಯ ಅಂಗವಾಗಿದೆ, ಆದರೆ ಕೆಲವು ದುಷ್ಟಶಕ್ತಿಗಳು ಗೋರಕ್ಷಕರನ್ನು ಕೆಟ್ಟದಾಗಿ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಭಾಗವತ್

ನಾಗಪುರ (ಅ.11): ನಕಲಿ ಗೋರಕ್ಷಕರ ನಡುವೆ ಅಸಲಿ ಗೋರಕ್ಷಕರನ್ನು ಗುರುತಿಸುವ ಅಗತ್ಯವಿದೆಯೆಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಗೋರಕ್ಷಣೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ ನೀಡಿದ್ದ ಹೇಳಿಕೆಗೆ ಸಹಮತ ವ್ಯಕ್ತಪಡಿಸಿದ ಧಾಟಿಯಲ್ಲಿ ಮಾತನಾಡಿದ  ಮೋಹನ್ ಭಾಗವತ್, ಗೋರಕ್ಷಕರು ಕಾನೂನಿನ ಪರಿಮಿತಿಯೊಳಗೆ ಕಾರ್ಯಾಚರಿಸಬೇಕು ಎಂದು ಕರೆ ನೀಡಿದ್ದಾರೆ.

ವಿಜಯದಶಮಿ ಸಂದರ್ಭದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಭಾಗವತ್, ಗೋರಕ್ಷಣೆಯು ಸಂವಿಧಾನದ ಅವಿಭಾಜ್ಯ ಅಂಗವಾಗಿದೆ, ಆದರೆ ಕೆಲವು ದುಷ್ಟಶಕ್ತಿಗಳು ಗೋರಕ್ಷಕರನ್ನು ಕೆಟ್ಟದಾಗಿ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಂತಹ ದುಷ್ಟಶಕ್ತಿಗಳ ವಿರುದ್ಧ ನಾವು ಎಚ್ಚರದಿಂದಿರಬೇಕು; ಅವುಗಳು ಲಾಭ ಪಡೆಯದಂತಾಗಲು ನಾವು ಸಮಾಜವನ್ನು ಒಗ್ಗೂಡಿಸಬೇಕು, ಎಂದು ಅವರು ಕರೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಸ್ಸಿ ಕಿಕ್ ಮಾಡಿದ ಚೆಂಡಿಗಾಗಿ ಕಿತ್ತಾಡಿದ ಅಭಿಮಾನಿಗಳು: ವೀಡಿಯೋ ಭಾರಿ ವೈರಲ್
ಕರ್ನಾಟಕಕ್ಕೆ ಮಹಾತ್ಮ ಗಾಂಧಿ ನರೇಗಾ ಯೋಜನೆ 5 ಕೋಟಿ ಮಾನವ ದಿನ ಕಡಿತ; ಪ್ರಿಯಾಂಕ್ ಖರ್ಗೆ ಆರೋಪ