ಪಾಕ್ ಜಿಂದಾಬಾದ್ ಎಂದ ಅಮೂಲ್ಯ ಮುಖಕ್ಕೆ ಕ್ಯಾಕರಿಸಿ ಉಗಿದ ನೆಟ್ಟಿಗರು!

Suvarna News   | Asianet News
Published : Feb 20, 2020, 08:39 PM IST
ಪಾಕ್ ಜಿಂದಾಬಾದ್ ಎಂದ ಅಮೂಲ್ಯ ಮುಖಕ್ಕೆ ಕ್ಯಾಕರಿಸಿ ಉಗಿದ ನೆಟ್ಟಿಗರು!

ಸಾರಾಂಶ

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ. ಕೇಂದ್ರ ಸರ್ಕಾರದ ಪೌರತ್ವ ಕಾಯ್ದಿ ಹಾಗೂ NRC ವಿರೋಧಿ ಪ್ರತಿಭಟನೆಯಲ್ಲಿ ಕೊಪ್ಪದ ಅಮೂಲ್ಯ ಪಾಕ್ ಪರ ಘೋಷಣೆ ಕೂಗಿದ್ದಾರೆ. ಅಮೂಲ್ಯ ಹಾಗೂ ಕಾರ್ಯಕ್ರಮ ಆಯೋಜಕರಿಗೆ ಕಠಿಣ ಶಿಕ್ಷೆ ವಿಧಿಸಲು ನೆಟ್ಟಿಗರು ಆಗ್ರಹಿಸಿದ್ದಾರೆ. 

ಬೆಂಗಳೂರು(ಫೆ.20): ಪೌರತ್ವ ಕಾಯ್ದಿ ಹಾಗೂ NRC ವಿರೋಧಿಸಿ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ದೇಶ ದ್ರೋಹದ ಕೂಗು ಭಾರಿ ವಿವಾದ ಸೃಷ್ಟಿಸಿದೆ. HMSI ಸಂಘಟನೆ ಆಯೋಜಿಸಿದ ಪ್ರತಿಭಟನೆಯಲ್ಲಿ ಕೊಪ್ಪ ಮೂಲದ ಅಮೂಲ್ಯ ಲಿಯೋನ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗೋ ಮೂಲಕ ದೇಶದ್ರೋಹದ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ಅರೆಸ್ಟ್

ಕೇಂದ್ರ ಜಾರಿಗೆ ತಂದ CAA  ಹಾಗೂ NRC ವಿರೋಧಿಸಿ ನಡೆದ ಪ್ರತಿಭಟನಾ ಸಮಾವೇಶಕ್ಕೆ ಸಂಸದ ಅಸಾದುದ್ದೀನ್ ಓವೈಸಿ ಮುಖ್ಯ ಅತಿಥಿಯಾಗಿದ್ದರು. ಈ ಕಾರ್ಯಕ್ರಮದ ಅಂತ್ಯದಲ್ಲಿಎಡಪಂಥಿಯ ಅಮೂಲ್ಯ ಪಾಕಿಸ್ತಾನ ಜಿಂದಾಬಾದ್ ಎಂದು ಎರಡೆರಡು ಬಾರಿ ಕೂಗಿದ್ದಾರೆ. ಅಮೂಲ್ಯ ಹಾಗೂ ಆಯೋಜಕರ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ. ದೇಶದ್ರೋಹಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಿ ಎಂದು ಆಗ್ರಹಿಸಿದ್ದಾರೆ.


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೆಲುವಿನ ವಿಶ್ವಾಸದಲ್ಲಿ ಬೆಟ್ , ಚುನಾವಣೆ ಫಲಿತಾಂಶ ಉಲ್ಟಾ ಬೆನ್ನಲ್ಲೇ ಮೀಸೆ ಬೋಳಿಸಿದ ಮುಖಂಡ
ಚಿಕ್ಕಮಗಳೂರು: ಹೈಟೆಕ್ ಕಾರ್‌ನಲ್ಲಿ ಗೋ ಕಳ್ಳತನ; ಸಿನಿಮೀಯ ಶೈಲಿಯಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಚೇಸಿಂಗ್!