
ಹಾಸನ(ಜು.19): ಹಾಸನಕ್ಕೆ ನೂತನವಾಗಿ ವರ್ಗವಾಗಿ ಬಂದಿರುವ ಜಿಲ್ಲಾಧಿಕಾರಿಗಳು ಫುಲ್ ಅಲರ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಡಿಸಿ ಕಚೇರಿಗೆ ಮೇಜರ್ ಸರ್ಜರಿ ಮಾಡಲು ಹೊರಟಿರುವ ಇವರು, ಹತ್ತಾರು ವರ್ಷಗಳಿಂದ ಒಂದೇ ಕಡೆ ಬೇರೂರಿದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶಾಕ್ ಕೊಟ್ಟಿದ್ದಾರೆ.
ರೋಹಿಣಿ ಸಿಂಧೂರಿ ಇವರು ಇಡೀ ಕರ್ನಾಟಕಕ್ಕೆ ಚಿರಪರಿಚಿತ ಎನ್ನಬಹುದು. ಯಾಕೆಂದರೆ ಒಂದು ಸಮಯದಲ್ಲಿ ಇವರು ಇಡೀ ದೇಶಾದ್ಯಂತ ಸುದ್ದಿಯಾಗಿದ್ದರು. ಇದೀಗ ರೋಹಿಣಿ ಸಿಂಧೂರಿ ಹಾಸನ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ನೂತನ ಜಿಲ್ಲಾಧಿಕಾರಿಯಾಗಿ ಹಾಸನಕ್ಕೆ ಬಂದಿರುವ ರೋಹಿಣಿ ಸಿಂಧೂರಿ ಡಿಸಿ ಕಚೇರಿಯಲ್ಲಿ ಮೇಜರ್ ಸರ್ಜರಿ ಮಾಡಿದ್ದು, 54 ಮಂದಿ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಿದ್ದಾರೆ. ಹತ್ತಾರು ವರ್ಷಗಳಿಂದ ಡಿಸಿ ಕಚೇರಿ, ಹಾಗೂ ಇತರ ಆಯಕಟ್ಟಿನ ಜಾಗಗಳಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳನ್ನು ದಿಢೀರ್ ವರ್ಗಾವಣೆ ಮಾಡೋ ಮೂಲಕ ಶಾಕ್ ಕೊಟ್ಟಿದ್ದಾರೆ.
ಹಾಸನ ಡಿಸಿ ಯಾಗಿ ಅಧಿಕಾರ ವಹಿಸಿಕೊಂಡ 24 ಗಂಟೆಗಳಲ್ಲಿ ದಿಟ್ಟ ಕ್ರಮ ತೆಗೆದುಕೊಂಡಿರೋ ರೋಹಿಣಿ ಸಿಂಧೂರಿ, ಆಡಳಿತ ವ್ಯವಸ್ಥೆಗೆ ಬದಲಾವಣೆಯ ಟಚ್ ಕೊಟ್ಟಿದ್ದಾರೆ. 35 ಗ್ರಾಮ ಲೆಕ್ಕಿಗರು, 19 ಮಂದಿ SDA - FDA ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಇನ್ನು ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ದಿಟ್ಟಕ್ರಮಕ್ಕೆ ಜನ-ಸಾಮಾನ್ಯರು ಶ್ಲಾಘನೆ ವ್ಯಕ್ತಪಡಿಸಿದ್ದು, ಇನ್ನು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.