
ಮುಂಬರುವ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಮಣೆ ಹಾಕಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ಈ ಪೈಕಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು 2019ರ ಲೋಕಸಭಾ ಚುನಾವಣೆಗೆ ಕಣಕ್ಕಿಳಿಸುವ ನಿಟ್ಟಿನಲ್ಲಿ ಬಿಜೆಪಿ ಪ್ಲಾನ್ ಮಾಡಿದೆ.
ಚಿತ್ರದುರ್ಗ ಮೀಸಲು ಲೋಕಸಭಾ ಕ್ಷೇತ್ರದಿಂದ ಮಾದಾರ ಚನ್ನಯ್ಯ ಸ್ವಾಮೀಜಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಪರಿಶೀಲನೆ ನಡೆಸಿದೆ. ಇಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನಿವಾಸದಲ್ಲಿ ನಡೆದ ದಲಿತ ಕುಟುಂಬಗಳ ಜೊತೆ ಭೋಜನ ಕೂಟದಲ್ಲಿ ಮಾದಾರ ಚನ್ನಯ್ಯ ಸ್ವಾಮೀಜಿ ಕೂಡಾ ಪಾಲ್ಗೊಂಡಿದ್ದರು. ಈ ಎಲ್ಲಾ ವಿಚಾರಗಳಿಗೆ ಪುಷ್ಠಿ ಒದಗಿಸಿದೆ. ಇದರ ಜೊತೆಯಲ್ಲೇ ಈ ಕುರಿತು ಕಾಲ ಬಂದಾಗ ನೋಡೋಣ ಎಂದು ಪೂರಕವಾಗಿ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.