
ಬೆಂಗಳೂರು(ಅ.4): ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದ ಏಕಸದಸ್ಯ ಪೀಠದ ಕ್ರಮ ಪ್ರಶ್ನಿಸಿ ದ್ವಿ ಸದಸ್ಯ ಪೀಠದಲ್ಲಿ ಅರ್ಜಿ ಸಲ್ಲಿಕೆಯಾಗಿದೆ.
ಗಣಪತಿ ತಂದೆ ಎಂ.ಕೆ. ಕುಶಾಲಪ್ಪ ಹಾಗೂ ಸಹೋದರ ಎಂ.ಕೆ. ಮಾಚಯ್ಯ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಮತ್ತು ನ್ಯಾ. ಆರ್.ಬಿ.ಬೂದಿಹಾಳ್ ಅವರಿದ್ದ ನ್ಯಾಯಪೀಠ, ನಾಲ್ಕುವಾರಗಳ ಕಾಲ ಮುಂದೂಡಿತು.
ಅಪರೂಪದ ಪ್ರಕರಣವಾಗಿದ್ದರೆ ಮತ್ತು ತನಿಖೆಯ ಮೇಲೆ ಸಾಕಷ್ಟು ಅನುಮಾನಗಳು ಉದ್ಭವಿಸಿದ್ದ ಪ್ರಕರಣಗಳನ್ನು ಮಾತ್ರ ನ್ಯಾಯಾಲಯಗಳು ಸಿಬಿಐ ತನಿಖೆಗೆ ವಹಿಸಬಹುದು ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ಆದೇಶ ನೀಡಿದೆ ಎಂದು ಆಭಿಪ್ರಾಯ ಪಟ್ಟಿದ್ದ ಏಕ ಸದಸ್ಯಪೀಠ ಅರ್ಜಿಯನ್ನು ಸೆ.20ರಂದು ವಜಾಗೊಳಿಸಿತ್ತು.
ಈ ಪ್ರಕರಣದಲ್ಲಿ ಇಲ್ಲಿಯವರೆಗೂ ಯಾವುದೇ ಆರೋಪಿಯನ್ನು ಬಂಸಿಲ್ಲ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್‌ನೋಟ್ ಇಡಲಾಗಿತ್ತು. ಅಲ್ಲದೆ, ಗಣಪತಿ ಆತ್ಮಹತ್ಯೆಗೂ ಮುನ್ನ ಗೃಹ ಸಚಿವರಾಗಿದ್ದ ಕೆ.ಜೆ.ಜಾರ್ಜ್ ಮತ್ತು ಹಿರಿಯ ಐಪಿಎಸ್ ಅಕಾರಿಗಳಾದ ಪ್ರಣವ್ ಮೊಹಾಂತಿ ಮತ್ತು ಎ.ಎಂ.ಪ್ರಸಾದ್ ಅವರ ವಿರುದ್ಧ ಆರೋಪ ಮಾಡಿದ್ದಾರೆ. ಆದ್ದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.