ಹೊಸ ವರ್ಷದ ಸಂದರ್ಭದಲ್ಲಿ ಏನೇನು ಮಾಡಿದ್ರೆ ಕ್ರಮ..?

Published : Dec 31, 2018, 09:51 AM IST
ಹೊಸ ವರ್ಷದ ಸಂದರ್ಭದಲ್ಲಿ ಏನೇನು ಮಾಡಿದ್ರೆ ಕ್ರಮ..?

ಸಾರಾಂಶ

ಹೊಸ ವರ್ಷದ ಆಚರಣೆ ಹಿನ್ನೆಲೆಯಲ್ಲಿ ನಗರದ ಎಲ್ಲೆಡೆ ಪೊಲೀಸ್ ಹದ್ದಿನ ಕಣ್ಣು ಇರಿಸಲಾಗಿದೆ. 31ರಂದು  9 ಗಂಟೆಯಿಂದ ಜ.1ರ ಬೆಳಗ್ಗೆ 6ರವರೆಗೆ ಮೇಲ್ಸೇತುವೆ ಮೇಲೆ ಸಂಚಾರ ನಿಷೇಧಿಸಲಾಗಿದೆ. 

ಬೆಂಗಳೂರು : ಹೊಸ ವರ್ಷಾಚರಣೆಯ ಸಂಭ್ರಮದ ಹಿನ್ನೆಲೆಯಲ್ಲಿ ಎಲ್ಲೆಡೆ ಹದ್ದಿನ ಕಣ್ಣಿಟ್ಟಿರುವ ನಗರ ಪೊಲೀಸರು ಅಪಘಾತ ಪ್ರಕರಣ ತಡೆಗಟ್ಟಲು ನಗರದ ಮೇಲ್ಸೇತುವೆಗಳಲ್ಲಿ ಡಿ. 31 ರಂದು ಸಂಚಾರ ನಿಷೇಧಿಸಲಾಗಿದೆ.  ಅಂದು ರಾತ್ರಿ 9 ಗಂಟೆಯಿಂದ ಜ.1ರ ಬೆಳಗ್ಗೆ 6ರವರೆಗೆ ಮೇಲ್ಸೇತುವೆ ಮೇಲೆ ಸಂಚಾರ ನಿಷೇಧಿಸಲಾಗಿದೆ. 

ಎಲ್ಲಾ ಮೇಲ್ಸೇತುವೆಗಳ ಪ್ರವೇಶ ಮತ್ತು ನಿರ್ಗಮನದ ಸ್ಥಳಗಳಲ್ಲಿ ಅತಿ ವೇಗವನ್ನು ತಡೆಯಲು ‘ಝಿಗ್‌ಝಾಗ್’ ಮಾದರಿಯಲ್ಲಿ ಬ್ಯಾರಿಕೇಡ್ ಅಳವಡಿಸಲಾಗುವುದು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ರಾಣಿ ವೃತ್ತದಿಂದ ನಂದಿ ಬೆಟ್ಟದವರೆಗೆ ಡ್ರ್ಯಾಗ್ ರೇಸಿಂಗ್, ವ್ಹೀಲಿಂಗ್ ಮತ್ತು ವೇಗವಾಗಿ ವಾಹನ ಚಾಲನೆ ಮಾಡುವವರನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಲಾಗಿದೆ. ಇನ್ನು ನಗರದ ಹೊರ ವರ್ತುಲ ರಸ್ತೆಗಳಲ್ಲಿ ವಿಶೇಷ ನಿಗಾ ಇರಿಸಲಾಗಿದೆ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ. 

ಸಂಚಾರ ನಿಷೇಧ: ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಮೆಯೋ ಹಾಲ್ ಬಳಿಯ ರೆಸಿಡೆನ್ಸಿ ರಸ್ತೆ ಜಂಕ್ಷನ್, ಬ್ರಿಗೇಡ್ ರಸ್ತೆ, ಕಾವೇರಿ ಎಂಪೋರಿಯಂ ಜಂಕ್ಷನ್‌ನಿಂದ ಅಪೇರಾ ಜಂಕ್ಷನ್, ಮ್ಯೂಸಿಯಂ ರಸ್ತೆ, ಎಂ.ಜಿ.ರಸ್ತೆ ಜಂಕ್ಷನ್‌ನಿಂದ ಹಳೇ ಮದ್ರಾಸ್ ಬ್ಯಾಂಕ್ ರಸ್ತೆ, ರೆಸ್ಟ್ ಹೌಸ್ ರಸ್ತೆ, ಮ್ಯೂಸಿಯಂ ರಸ್ತೆ ಜಂಕ್ಷನ್ ನಿಂದ ಬ್ರಿಗೇಡ್ ರಸ್ತೆ ಜಂಕ್ಷನ್, ಕಾವೇರಿ ಎಂಪೋರಿಯಂ, ಕಬ್ಬನ್ ರಸ್ತೆ ಜಂಕ್ಷನ್‌ವರೆಗೆ ಹಾಗೂ ಕಬ್ಬನ್ ರಸ್ತೆ ಜಂಕ್ಷನ್‌ನಿಂದ ಕಾವೇರಿ ಎಂಪೋರಿಯಂ, ರೆಸಿಡೆನ್ಸಿ ರಸ್ತೆ ಜಂಕ್ಷನ್‌ನಿಂದ ಎಂ.ಜಿ.ರಸ್ತೆ ಜಂಕ್ಷನ್‌ವರೆಗೆ ಡಿ.31ರ ರಾತ್ರಿ 8 ರಿಂದ ಜ.1ರ ಬೆಳಗಿನ ಜಾವ 2ರವರೆಗೆ ಈ ರಸ್ತೆ ಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

ಇಲ್ಲಿ ನಿಲುಗಡೆ ಬೇಡ: ಎಂ.ಜಿ.ರಸ್ತೆಯಲ್ಲಿ ಕ್ವೀನ್ಸ್‌ವೃತ್ತದಿಂದ ಟ್ರಿನಿಟಿ ವೃತ್ತದವರೆ, ಕಬ್ಬನ್ ರಸ್ತೆ, ರೆಸಿಡೆನ್ಸಿ ರಸ್ತೆ, ರಿಚ್‌ಮಂಡ್ ರಸ್ತೆ, ಇನ್ಫೆಂಟ್ರಿ ರಸ್ತೆ, ಬ್ರಿಗೇಡ್ ರಸ್ತೆ, ಅಶೋಕನಗರ ಹಳೇ ಪಿ.ಎಸ್.ಜಂಕ್ಷನ್, ಚರ್ಚ್‌ಸ್ಟ್ರೀಟ್, ಮ್ಯೂಸಿಯಂ ರಸ್ತೆ, ರೆಸ್ಟ್ ಹೌಸ್ ರಸ್ತೆ, ಕಾಮರಾಜ ರಸ್ತೆ, ಕಾವೇರಿ ಆರ್ಟ್ಸ್ ಅಂಡ್ ಕ್ರಾಫ್ ಜಂಕ್ಷನ್‌ನಿಂದ ಡಿಕನ್ಸನ್ ರಸ್ತೆ ಜಂಕ್ಷನ್ ವರೆಗೆ, ಸೆಂಟ್ ಮಾರ್ಕ್ಸ್ ರಸ್ತೆ, ಮೆಗ್ರಾತ್ ರಸ್ತೆ, ಕಮಿಷಿಯರೆಟ್ ರಸ್ತೆ, ಮಾರ್ಕನ್ ರಸ್ತೆ, ಇಂದಿರಾನಗರ 100 ಅಡಿ ರಸ್ತೆಯಲ್ಲಿ ಡಿ. 31 ರ ಸಂಜೆ ೪ರಿಂದ ಜ. 1ರ ಬೆಳಗಿನ ಜಾವ 2ರವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ. 

ಈ ರಸ್ತೆಗಳಲ್ಲಿ ಟೋಯಿಂಗ್ ಮಾಡಿದ ವಾಹನಗಳನ್ನು ಜ.1 ರ ಬೆಳಗ್ಗೆ 6ರ ನಂತರವೇ ಬಿಡುಗಡೆ ಮಾಡಲಾಗುವುದು ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ