
ನವದೆಹಲಿ (ಅ.26): ಪರಮಾಣು ಪೂರೈಕೆದಾರರ ಸಮೂಹದ (ಎನ್ಎಸ್’ಜಿ) ಸದಸ್ಯತ್ವ ಪಡೆಯುವ ಭಾರತದ ಪ್ರಯತ್ನಗಳಿಗೆ ತಮ್ಮ ಬೆಂಬಲವಿದೆ ಎಂದು ಭಾರತದ ಪ್ರವಾಸದಲ್ಲಿರುವ ನ್ಯೂಝಿಲ್ಯಾಂಡ್ ಪ್ರಧಾನಿ ಜಾನ್ ಕೀ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೀ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ ಸಿಗಬೇಕು ಎಂದು ಹೇಳಿದ್ದಾರೆ.
ಭಾರತಕ್ಕೆ ಎನ್ಎಸ್’ಜಿ ಸದಸ್ಯತ್ವ ನೀಡುವ ವಿಚಾರದಲ್ಲಿ ಇತರ ಸದಸ್ಯ-ದೇಶಗಳೊಂದಿಗೆ ನ್ಯೂಝಿಲ್ಯಾಂಡ್ ಚರ್ಚಿಸಲಿದೆ ಎಂದು ಪ್ರಧಾನಿ ಕೀ ಹೇಳಿದ್ದಾರೆ.
ಭಾರತದಲ್ಲಿ ಬದಲಾವಣೆಯಾಗಿದೆ ಹಾಗೂ ದೇಶ ಅಭಿವೃದ್ಧಿ ಹೊಂದಿದೆ. ನ್ಯೂಝಿಲ್ಯಾಂಡ್ ಭಾರತದೊಂದಿಗೆ ಉತ್ತಮ ಬಾಂಧ್ಯವವನ್ನು ಮುಂದುವರೆಸಲಿದೆ ಎಂದು ಕೀ ಈ ಸಂದರ್ಭದಲ್ಲಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.