
ಬೆಂಗಳೂರು (ಜೂ. 07): ಯುವ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ದಿನವೇ ಭಿನ್ನಮತ ಸ್ಫೋಟಗೊಂಡಿದ್ದು, ಐವರು ಉಪಾಧ್ಯಕ್ಷರು ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ.
ಇತ್ತೀಚೆಗೆ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮವಾಗಿದೆ, ಅದರ ಬಗ್ಗೆ ನಾಯಕರ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರಾಜಿನಾಮೆ ನೀಡಿದ ಉಪಾಧ್ಯಕ್ಷರುಗಳು ಆರೋಪಿಸಿದ್ದಾರೆ.
ನಾಯಕರ ಈ ಕ್ರಮದಿಂದ ಬೇಸತ್ತು ಉಪಾಧ್ಯಕ್ಷರುಗಳಾದ ಕೆಂಪರಾಜು, ರಾಜೇಂದ್ರ ರಾಜಣ್ಣ, ಕೆ ಶಿವಕುಮಾರ್, ಸಮೀಯಾ ತರ್ಬೇಜ್ ಹಾಗೂ ಕಾರ್ಯದರ್ಶಿ ಉಮೇಶ್ ಬೋರೇಗೌಡ ಯುವ ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.