ಇನ್ನೆರಡು ದಿನ ರಾಜಧಾನಿಯಲ್ಲಿ ಮಳೆ

Published : Dec 05, 2018, 09:30 AM IST
ಇನ್ನೆರಡು ದಿನ ರಾಜಧಾನಿಯಲ್ಲಿ ಮಳೆ

ಸಾರಾಂಶ

ಬಂಗಾಳಕೊಲ್ಲಿಯಲ್ಲಿ ಹಿಂಗಾರು ಚುರುಕಾದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆ ಮಳೆಯಾಗುತ್ತಿದೆ. ಇನ್ನು ಎರಡು ದಿನ ನಗರದಲ್ಲಿ ಮಳೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಕರ್ನಾಟಕ ರಾಜ್ಯ ನೈಸಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

ಬೆಂಗಳೂರು :  ಒಂದುವರೆ ತಿಂಗಳ ನಂತರ ನಗರದಲ್ಲಿ ಮಂಗಳವಾರ ತುಂತುರು ಮಳೆಯ ಸಿಂಚನವಾಗಿದೆ.

ಮುಂಗಾರು ಮುಕ್ತಾಯಗೊಳ್ಳುತ್ತಿದ್ದಂತೆ ನಗರದಲ್ಲಿ ಕಣ್ಮರೆಯಾಗಿದ್ದ ಮಳೆರಾಯ ಮತ್ತೆ ಮಂಗಳವಾರ ಪ್ರತ್ಯಕ್ಷನಾಗಿದ್ದಾನೆ. ಮುಂಗಾರು ಅವಧಿ ಪೂರ್ಣವಾದ ಬಳಿಕ ಕಳೆದ ಅಕ್ಟೋಬರ್‌ನಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ನಗರದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆಯಾಗಿದ್ದು ಬಿಟ್ಟರೆ ನಗರದಲ್ಲಿ ಮಳೆಯಾಗಿರಲಿಲ್ಲ. 

ಇದೀಗ ಬಂಗಾಳಕೊಲ್ಲಿಯಲ್ಲಿ ಹಿಂಗಾರು ಚುರುಕಾದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಕಡೆ ಮಳೆಯಾಗುತ್ತಿದೆ.

ನಗರ ವಿವಿಧ ಭಾಗದಲ್ಲಿ ಸುಮಾರು 7 ಮಿ.ಮೀ. ಮಳೆಯಾದ ವರದಿಯಾಗಿದೆ. ಇನ್ನು ಎರಡು ದಿನ ನಗರದಲ್ಲಿ ಮಳೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಕರ್ನಾಟಕ ರಾಜ್ಯ ನೈಸಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Cockroach Janata Part: ಕಾಕ್ರೋಚ್ ಭಯ ಕಾಂಗ್ರೆಸ್‌ಗೆ ಹೊರತು ಬಿಜೆಪಿಗಲ್ಲ; ಪ್ರಲ್ಹಾದ್ ಜೋಶಿ ಕೊಟ್ಟ ಉತ್ತರ ಕೇಳಿ ಶಾಕ್!
India News Live: IPL 2026 - ಪಂಜಾಬ್ ಕಿಂಗ್ಸ್ ಗೆಲ್ಲುತ್ತಿದ್ದಂತೆಯೇ ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದ ಮತ್ತೊಂದು ತಂಡ!