ಶಾಸಕರ ಸಭೆಯಲ್ಲಿ ನಿಖಿಲ್‌: ಜನಪ್ರತಿನಿಧಿಯೇ ಅಲ್ಲದ ಸಿಎಂ ಪುತ್ರನಿಗೇನು ಕೆಲಸವಿಲ್ಲಿ?

Published : Apr 29, 2019, 10:58 AM ISTUpdated : Apr 29, 2019, 11:32 AM IST
ಶಾಸಕರ ಸಭೆಯಲ್ಲಿ ನಿಖಿಲ್‌: ಜನಪ್ರತಿನಿಧಿಯೇ ಅಲ್ಲದ ಸಿಎಂ ಪುತ್ರನಿಗೇನು ಕೆಲಸವಿಲ್ಲಿ?

ಸಾರಾಂಶ

ಲೋಕಸಭಾ ಚುನಾವಣೆ ಮುಕ್ತಾಯವಾದ ಈ ಸಂದರ್ಭದಲ್ಲಿ ಅಭ್ಯರ್ಥಿಗಳು ಸ್ವಲ್ಪ ನಿರಾಳರಾಗಿದ್ದು, ಹಲವು ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇದೇ ವೇಳೆ ನಿಖಿಲ್ ಕುಮಾರಸ್ವಾಮಿ ಕೂಡ ಜೆಡಿಎಸ್ ಶಾಸಕರ ಸಭೆಯಲ್ಲಿ ಪಾಲ್ಗೊಂಡಿದ್ದರು. 

ಬೆಂಗಳೂರು :  ಭಾನುವಾರ ನಡೆದ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಭಾಗಿಯಾಗಿದ್ದರು.

ಸಾಮಾನ್ಯವಾಗಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು, ಮಂತ್ರಿಗಳು ಭಾಗಿಯಾಗುವುದು ವಾಡಿಕೆ. ಬೇರೆಯವರಿಗೆ ಅಧಿಕೃತ ಆಹ್ವಾನ ಇದ್ದರೆ ಮಾತ್ರ ಪಾಲ್ಗೊಳ್ಳಬಹುದು.

ಆದರೆ, ಪಕ್ಷದ ಇತರ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳಿಲ್ಲದೆ ಕೇವಲ ನಿಖಿಲ್‌ ಕುಮಾರಸ್ವಾಮಿ ಅವರೊಬ್ಬರೇ ಸಭೆಯಲ್ಲಿ ಪಾಲ್ಗೊಂಡಿದ್ದು ಅಚ್ಚರಿ ಮೂಡಿಸಿತು. ಅವರೊಬ್ಬರಿಗೆ ಆಹ್ವಾನ ಇದ್ದುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಅಭ್ಯರ್ಥಿಯ ಎದುರೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಮತದಾನದ ಗುಪ್ತಚರ ವರದಿ ಪ್ರಸ್ತಾಪಿಸಿ, ಶಾಸಕ, ಸಚಿವರೊಂದಿಗೆ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಫ್ರೀಡಂ ಪಾರ್ಕ್‌ನಲ್ಲಿ ಕೈಗೆ ಕೋಳ ಹಾಕಿಕೊಂಡು 'STOP killing Men' ಪ್ರತಿಭಟನೆ ಮಾಡಿದ ಪುರುಷರು!
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ