
ಬೆಂಗಳೂರು : ಕೇರಳದಲ್ಲಿ ನಿಫಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ತೀವ್ರ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಕೇರಳದಲ್ಲಿ ಕಳೆದ ವರ್ಷ 17 ಮಂದಿ ನಿಫಾ ವೈರಸ್ ಗೆ ಬಲಿಯಾಗಿದ್ದು, ಈ ಬಾರಿ 5 ಮಂದಿಯಲ್ಲಿ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೇರಳಕ್ಕೆ ಹೋಗುವ ಜನರನ್ನ ಆದಷ್ಟು ತಡೆಯುವುದು ಹಾಗೂ ಕೇರಳದಿಂದ ಆಗಮಿಸುವವರ ಬಗ್ಗೆ ತೀವ್ರ ನಿಗಾ ವಹಿಸಲು ಸೂಚನೆ ನೀಡಲಾಗಿದೆ. ಬಾವಲಿ ತಿಂದು ಬಿಟ್ಟ ಹಣ್ಣಿನ ಸೇವನೆ ಮಾಡುವ ಮುನ್ನ ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.
ಕೇರಳದ ಗಡಿ ಪ್ರದೇಶಗಳಲ್ಲಿಯೂ ಕೂಡ ಕಟ್ಟೆಚ್ಚರ ವಹಿಸುವಂತೆ ಆದೇಶಿಸಿದ್ದು, ಈ ಬಗ್ಗೆ ಜನರು ಆತಂಕಪಡುವ ಅಗತ್ಯವಿಲ್ಲ. ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ನಿಫಾ ಬಗ್ಗೆ ನಿಗಾ ಇಡುವಂತೆ ಸರ್ಕಾರಿ ಆಸ್ಪತ್ರೆಗಳಿಗೂ ತಿಳಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ಉಪ ನಿರ್ದೇಶಕ ಡಾ.ಬಿ.ಜಿ.ಪ್ರಕಾಶ್ ಕುಮಾರ್ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.