
ನವದೆಹಲಿ: 11400 ಕೋಟಿ ರು. ವಂಚನೆ ಪ್ರಕರಣದ ಪ್ರಮುಖ ಆರೋಪಿ ನೀರವ್ ಮೋದಿ ಮತ್ತು ಆತನ ಕುಟುಂಬ ಸದಸ್ಯರು ಅಮೆರಿಕದ ನ್ಯೂಯಾರ್ಕ್ ಐಷಾರಾಮಿ ಹೋಟೆಲ್ ಒಂದರಲ್ಲಿ ಇದ್ದಾರೆ ಎನ್ನಲಾಗಿದೆ.
ನ್ಯೂಯಾರ್ಕ್ನ ಮ್ಯಾನ್‌ಹಟನ್ ಪ್ರದೇಶದಲ್ಲಿರುವ ಜೆಡಬ್ಲ್ಯುಯು ಮ್ಯಾರಿಯಟ್ಸ್ ಎಸ್ಸೆಕ್ಸ್ ಹೌಸ್ ಹೋಟೆಲ್‌ನ 36ನೇ ಮಹಡಿಯ ಬೃಹತ್ ಅಪಾರ್ಟ್‌ಮೆಂಟ್‌ನಲ್ಲಿ ತಂಗಿದ್ದಾರೆ ಎಂದು ಹಲವು ಖಾಸಗಿ ಸುದ್ದಿವಾಹಿನಿಗಳು ವರದಿ ಮಾಡಿವೆ.
ಕಳೆದ ಜ.1ರಂದೇ ನೀರವ್ ಭಾರತ ಬಿಟ್ಟು ಪರಾರಿಯಾಗಿದ್ದರು. ಆದರೆ ಎರಡು ದಿನಗಳ ಹಿಂದಷ್ಟೇ ಅವರ ಹಗರಣ ಬೆಳಕಿಗೆ ಬಂದಿತ್ತು. ಈ ಹಗರಣ ಬೆಳಕಿಗೆ ಬಂದ ಮೇಲೆ ನೀರವ್ ಇರುವ ಅಪಾರ್ಟ್‌ಮೆಂಟ್‌ನಲ್ಲಿ ಸಾಕಷ್ಟುಚಲನವಲನ ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.