
ಬೆಂಗಳೂರು (ಮಾ. 17): ಬಿಡದಿ ನಿತ್ಯಾನಂದನ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ.
ಪ್ರಾಸಿಕ್ಯೂಷನ್ ದಾಖಲೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಸಂತ್ರಸ್ತೆಯು ಆರೋಪಿ ನಿತ್ಯಾನಂದ ಸ್ವಾಮೀಜಿ ಜೊತೆ ಒಪ್ಪಿತ ಲೈಂಗಿಕ ಕ್ರಿಯೆ ನಡೆಸಿದ್ದಾಳೆ ಎಂದೇ ಹೇಳಬೇಕಾಗುತ್ತದೆ ಎಂದು ನಿತ್ಯಾನಂದ ಸ್ವಾಮೀಜಿ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ.
ಅತ್ಯಾಚಾರ ಆರೋಪದಲ್ಲಿ ದೋಷಮುಕ್ತಿ ಕೋರಿ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿರುವ ಅಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ನೇತೃತ್ವದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿದೆ. ಸಂತ್ರಸ್ತೆ ಮತ್ತು ಸಾಕ್ಷೀದಾರರೊಬ್ಬರ ನಡುವೆ ನಡೆದಿರುವ ಇ-ಮೇಲ್ ಸಂಭಾಷಣೆಯನ್ನು ಗಮನಿಸಿದರೆ ಆಕೆಯ ಮೇಲೆ ಆಶ್ರಮದಲ್ಲಿ ಅತ್ಯಾಚಾರ ನಡೆದೇ ಇಲ್ಲ. ಆದರೆ, ಪ್ರಾಸಿಕ್ಯೂಷನ್ ಸಂಗ್ರಹಿಸಿರುವ ದಾಖಲೆಗಳನ್ನು ಗಮನಿಸಿದರೆ ಇದೊಂದು ಒಪ್ಪಿತ ಲೈಂಗಿಕ ಕ್ರಿಯೆ ಎಂದೇ ಪರಿಗಣಿಸಬೇಕಾಗುತ್ತದೆ. ಅತ್ಯಾಚಾರದ ಆರೋಪ ಎಲ್ಲಿಂದ ಬಂತು’ ಎಂದು ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ.
ಪ್ರಾಸಿಕ್ಯೂಷನ್ ಪರ ಸಂದೇಶ್ ಜಿ. ಚೌಟ ವಾದ ಮಂಡಿಸಿ ಪ್ರಕರಣದ ಹಂತಗಳನ್ನು ವಿವರಿಸಿದರು. ವಿಚಾರಣೆಯನ್ನು ಮಾರ್ಚ್ 23ಕ್ಕೆ ಮುಂದೂಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.