
ನವದೆಹಲಿ (ಜ.16): ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರ ಮಕ್ಕಳಿಗೆ ಪ್ರವೇಶ ನೀಡುವುದಿಲ್ಲ ಎಂದು ಪಶ್ಚಿಮ ದೆಹಲಿಯ ಸಾಲ್ವಾನ್ ಶಾಲೆ ಷರತ್ತು ವಿಧಿಸಿದೆ.
ಕಡಿಮೆ ಮಕ್ಕಳನ್ನು ಹೊಂದಲು ಜನರನ್ನು ಪ್ರೋತ್ಸಾಹಿಸುವ ಸಲುವಾಗಿ ಶಾಲೆ ಪ್ರವೇಶ ಅರ್ಜಿಯಲ್ಲಿ ಈ ರೀತಿಯ ಷರತ್ತನ್ನು ಪ್ರಕಟಿಸಿದೆ.
ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಶಾಲೆಯಲ್ಲಿ ಶಿಕ್ಷಕರ ಹುದ್ದೆಗೂ ಅರ್ಜಿ ಸಲ್ಲಿಸಬಾರದು ಎಂಬ ನಿಯಮವೂ ಈ ಶಾಲೆಯಲ್ಲಿದೆ.
ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ನಾವು ಈ ರೀತಿಯ ತೀರ್ಮಾನ ಕೈಗೊಂಡಿದ್ದೇವೆ’ ಎಂದು ಸಾಲ್ವಾನ್ ಸಮೂಹದ ಅಧ್ಯಕ್ಷ ಸುಶೀಲ್ ಸಾಲ್ವಾನ್ ಹೇಳಿದ್ದಾರೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.