
ಬೆಂಗಳೂರು : ಜೆಡಿಎಸ್’ನೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಚುನಾವಣಾ ಪೂರ್ವ ಮೈತ್ರಿಗೆ ಸಿಎಂ ನಿರಾಕರಿಸಿದ್ದಾರೆ.
ಇನ್ನು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರು ದೇವೇಗೌಡರ ಚುನಾವಣಾ ಪೂರ್ವ ಮೈತ್ರಿ ಆಫರ್’ನ್ನು ತಿರಸ್ಕರಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್’ಗೆ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯತೆ ಇಲ್ಲ.
ಈ ರೀತಿಯ ವಿಚಾರಗಳು ಹೈ ಕಮಾಂಡ್ ಮಟ್ಟದಲ್ಲಿ ತೀರ್ಮಾನ ಆಗಬೇಕು. ಆದರೆ ನನಗೆ ಅನಿಸುವ ಪ್ರಕಾರ ಕಾಂಗ್ರೆಸ್’ಗೆ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವ ಅಗತ್ಯತೆ ಇಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಸಮರ್ಥವಾಗಿದೆ. ಜೆಡಿಎಸ್’ನೊಂದಿಗೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಅನಿವಾರ್ಯತೆ ಇಲ್ಲ ಎಂದು ಅವರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.