
ನವದೆಹಲಿ ( ಫೆ.27): ದೆಹಲಿ ವಿವಿಯ ರಾಮ್ ಜಾಸ್ ಕಾಲೇಜಿನಲ್ಲಿ ನಡೆದ ಹಿಂಸಾಚಾರ ಹಿನ್ನೆಲೆಯಲ್ಲಿ ಬಿಜೆಪಿ ಅಭಿವ್ಯಕ್ತಿ ಸ್ವಾತಂತ್ರವನ್ನು ಹತ್ತಿಕ್ಕುತ್ತಿದೆ ಎಂದು ಕಾಂಗ್ರೆಸ್ ಮಾಡಿರುವ ಆರೋಪಕ್ಕೆ ವೆಂಕಯ್ಯ ನಾಯ್ಡು ಪ್ರತಿಕ್ರಿಯಿಸಿದ್ದಾರೆ.
ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಜನರ ವಾಕ್ ಸ್ವಾತಂತ್ರವನ್ನು ಹತ್ತಿಕ್ಕಿದ್ದ ಪಕ್ಷ ಇಂದು ಅಭಿವ್ಯಕ್ತಿ ಸ್ವಾತಂತ್ರದ ಬಗ್ಗೆ ಉಪದೇಶ ನೀಡುತ್ತಿದೆ. ನಿಮ್ಮ ಪ್ರಧಾನ ಮಂತ್ರಿಯನ್ನೇ ಕತ್ತೆ ಎಂದು ಹೇಳುವ ಸ್ವಾತಂತ್ರ ನಿಮಗಿದೆ. ಅಭಿವ್ಯಕ್ತಿ ಸ್ವಾತಂತ್ರಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಾಗಿಲ್ಲ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ವೆಂಕಯ್ಯ ನಾಯ್ಡು ಕಟುಕಿದ್ದಾರೆ.
ದೇಶದ ಪ್ರಧಾನ ಮಂತ್ರಿಯನ್ನು ಕತ್ತೆಗೆ ಹೋಲಿಸುವ ದೇಶದಲ್ಲಿ ನೀವು ಬದುಕುತ್ತಿದ್ದೀರಿ. ಹಾಗಿರುವಾಗ ಅಭಿವ್ಯಕ್ತಿ ಸ್ವಾತಂತ್ರ ಇಲ್ಲ ಎಂದು ಹೇಳಲು ಹೇಗೆ ಸಾಧ್ಯ? ಬೇರೆಯವರ ಅಭಿಪ್ರಾಯಗಳನ್ನು ಗೌರವಿಸುವುದು. ಆದರೆ ಕಾಂಗ್ರೆಸ್ ಗೆ ಜನರ ಮೂಲಭೂತ ಹಕ್ಕುಗಳ ಬಗ್ಗೆಯೇ ಗೌರವವಿಲ್ಲ. ಅಂತದ್ದರಲ್ಲಿ ಜನರ ಮನಸ್ಸಿನಲ್ಲಿ ವಿಷವನ್ನು ತುಂಬಲು ಯತ್ನಿಸುತ್ತಿದ್ದಾರೆ ಎಂದು ವೆಂಕಯ್ಯ ನಾಯ್ಡು ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.